ಬಾಗಲಕೋಟೆ: ಸಾರ್ವಜನಿಕವಾಗಿ ಪಿಎಸ್ ಐ ನಿಂದಿಸಿದ ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ!ವಿಡಿಯೋ

 ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ, ಪಿಎಸ್ ಐ ಒಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

                                                     ಆನಂದ್ ನ್ಯಾಮಗೌಡ

By : Rekha.M
Online Desk

ಬಾಗಲಕೋಟೆ: ಕಾಂಗ್ರೆಸ್ ಶಾಸಕ ಆನಂದ್ ನ್ಯಾಮಗೌಡ, ಪಿಎಸ್ ಐ ಒಬ್ಬರನ್ನು ಸಾರ್ವಜನಿಕವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಜಮಖಂಡಿಯಲ್ಲಿ ವೃತ್ತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಬಸವರಾಜ್ ಕೊಣ್ಣೂರ ಕಾಂಗ್ರೆಸ್ ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಸ್ಥಳದಲ್ಲಿ ತಮ್ಮ ಬೆಂಬಲಿಗರ ಸಮ್ಮುಖದಲ್ಲಿ ಕರ್ತವ್ಯ ನಿರತ ಪಿಎಸ್‌ಐ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಶಾಸಕರ ವಿರುದ್ಧ ತೀವ್ರ ರೀತಿಯ ಟೀಕೆಗಳು ವ್ಯಕ್ತವಾಗುತ್ತಿವೆ.ವೃತ್ತ ನಿರ್ಮಿಸಿದರೆ ಸಮಸ್ಯೆಯಾಗುತ್ತದೆ ಎಂದು ಶಾಸಕರಿಗೆ ಮನವರಿಕೆ ಮಾಡಿಕೊಡಲು ಪಿಎಸ್ ಐ ಪ್ರಯತ್ನಿಸುತ್ತಾರೆ. ಇದು ಕಾಂಗ್ರೆಸ್ ಶಾಸಕರನ್ನು ಕೆರಳಿಸಿದೆ.

"ನೀವು ಸುಮ್ಮನಿರಿ. ನಿಮಗೆ ಏನು ಗೊತ್ತು? ನಾನು ನಿಮಗೆ ಹೇಳುತ್ತೇನೆ. ಈಗಿನ ಸರ್ಕಾರ ನಿಮಗೆ ಬೆಂಬಲ ನೀಡುತ್ತಿರಬಹುದು. ನಾನು ನಿನ್ನನ್ನು ಬಿಡುವುದಿಲ್ಲ ಎಂದು ಅವರು ಆವಾಜ್ ಹಾಕಿದ್ದಾರೆ. ಈ ವಿಡಿಯೋವನ್ನು  ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯ ರೌಡಿಗಳ ಅಡ್ಡವಾಗಲಿದೆ ಎಂದು ಟೀಕಿಸಿದೆ.Post a Comment

Previous Post Next Post