ದೇವೇಗೌಡರನ್ನು ಕಳ್ಳ ಎಂದ ಪ್ರಶಾಂತ್‌ ಸಂಬರಗಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಜೆಡಿಎಸ್‌ ದೂರು ದಾಖಲು

 ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಮಾನಹಾನಿಗೆ ಯತ್ನಿಸಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

                                                                      ಪ್ರಶಾಂತ್ ಸಂಬರಗಿ

By : Rekha.M
Online Desk

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಮಾನಹಾನಿಗೆ ಯತ್ನಿಸಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಜನತಾ ದಳ (ಜಾತ್ಯತೀತ) ಪಕ್ಷದ ಕಾನೂನು ಘಟಕ ದೂರು ದಾಖಲಿಸಿದೆ.

ಸಂಬರಗಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಧಾರರಹಿತ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುವ ಮೂಲಕ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ವರ್ಚಸ್ಸಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ ಎಂದು ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಡಿಸಿಪಿ (ಕೇಂದ್ರ) ಶ್ರೀನಿವಾಸಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ಸಂಬರಗಿ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳ ಮೂಲಕ ಧರ್ಮಗಳ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಪೊಲೀಸರು ಸಂಬರಗಿ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಬೇಕು ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು. ೇಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ. ದೂರು ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಭರವಸೆ ನೀಡಿದ್ದಾರೆ


Post a Comment

Previous Post Next Post