ವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ- ಭಾಮಾ ಹರೀಶ್

 ಪದೇ ಪದೇ ಚಿತ್ರರಂಗಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್ ಹೇಳಿದ್ದಾರೆ.

                                                     ಭಾಮಾ ಹರೀಶ್ ಮತ್ತು ಚೇತನ್

By : Rekha.M
Online Desk

ಬೆಂಗಳೂರು: ಪದೇ ಪದೇ ಚಿತ್ರರಂಗಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮಾ ಹರೀಶ್ ಹೇಳಿದ್ದಾರೆ.

ನಟ ಚೇತನ್ ಕನ್ನಡ ಚಿತ್ರರಂಗಕ್ಕೆ ಮುಜುಗರ ನೀಡುವಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿಯೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ಫಿಲ್ಮಂ ಚೇಂಬರ್ ನಿರ್ಧರಿಸಿದೆ ಎಂದು ಅಧ್ಯಕ್ಷ ಬಾ.ಮಾ ಹರೀಶ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಅಂಬರೀಶ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರ ಈ ಕಾರಣದಿಂದಾಗಿಯೇ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ರಸ್ತೆ ಎಂಬುದಾಗಿ ಹೆಸರಿಟ್ಟಿದ್ದಾರೆ. ಈ ಕ್ರಮವನ್ನೇ ಪ್ರಶ್ನಿಸಿ ನಟ ಚೇತನ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.

ಅಂತೆಯೇ ನಟ ಚೇತನ್ ಪದೇ ಪದೇ ಕನ್ನಡ ಚಿತ್ರರಂಗದಲ್ಲಿ ಇದ್ದುಕೊಂಡು, ಚಿತ್ರರಂಗಕ್ಕೆ ಮುಜುಗರ ಉಂಟುಮಾಡುವ ಹೇಳಿಕೆ ನೀಡುತ್ತಿದ್ದಾರೆ. ಚಿತ್ರರಂಗದ ಒಕ್ಕೊರಲ ಅಭಿಪ್ರಾಯದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಈಗಾಗಲೇ ತಿಳಿ ಹೇಳಲು ಯತ್ನಿಸಿದ್ದೇವೆ. ಆದರೂ ವರ್ತನೆ ತಿದ್ದಿಕೊಳ್ಳದ ಅವರ ವಿರುದ್ಧ ಅಸಹಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.Post a Comment

Previous Post Next Post