ಹಾಸನ: ಶ್ರವಣಬೆಳಗೊಳದ ಚಾರುಕೃತಿ ಭಟ್ಟಾರಕ ಸ್ವಾಮೀಜಿ ನಿಧನ

 ಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದಲ್ಲಿನ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದರು. 

                                                      ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

By : Rekha.M
Online Desk

ಹಾಸನ: ಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದಲ್ಲಿನ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಇಂದು ಇಹಲೋಕ ತ್ಯಜಿಸಿದರು. 

ಅನಾರೋಗ್ಯದ ಕಾರಣ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಶೀಗಳು ಕೆಲವು ತಿಂಗಳುಗಳಿಂದ ಅನರೋಗ್ಯದ ಸಮಸ್ಯೆ ಎದುರಿಸುತ್ತಿದ್ದರು.

ಸ್ವಾಮೀಜಿ ನಿಧನ ವಿಚಾರ ತಿಳಿದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು 4 ಮಹಾಮಸ್ತಕಾಭಿಷೇಕ ನಿರ್ವಹಿಸಿದ್ದರು.  


Post a Comment

Previous Post Next Post