ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ!

 ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಾರಿನಿಂದ ಡಿಕ್ಕಿ ಹೊಡೆದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮುಜತ್ ಸುಲ್ತಾನ್
By : Rekha.M
Online Desk

ಕಲಬುರಗಿ: ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಾರಿನಿಂದ ಡಿಕ್ಕಿ ಹೊಡೆದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸಾಮಾಜಿಕ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮೃತ ಸಾಮಾಜಿಕ ಕಾರ್ಯಕರ್ತೆಯನ್ನು ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿ 35 ವರ್ಷದ ಮುಜತ್ ಸುಲ್ತಾನ್ ಎಂದು ತಿಳಿದುಬಂದಿದೆ. ಮುಜತ್ ಸುಲ್ತಾನ್ ರನ್ನು ವಸೀಂ ಶೇಖ್, ನದೀಮ್, ಅಜೀಮ್ ಶೇಖ್ ಮತ್ತು ನದೀಮ್ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮುಜತ್ ಸುಲ್ತಾನ್ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದು ಡಿಕ್ಕಿ ಹೊಡೆದಿದ್ದಾರೆ. ನಂತರ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನುಷವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Post a Comment

Previous Post Next Post