ಮಾಜಿ ಸಿಎಂ ಯಡಿಯೂರಪ್ಪ ಹೆಲಿಕಾಪ್ಟರ್​​​ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು: ಕೆಲ ಕಾಲ ಆತಂಕ ಸೃಷ್ಟಿ

 ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆಯೊಂದು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ಸೋಮವಾರ ನಡೆದಿದೆ.

                                    ಲ್ಯಾಂಡಿಂಗ್ ವೇಳೆ ಹಾರಿಬಂದಿರುವ ಪ್ಲಾಸ್ಟಿಕ್ ಚೀಲಗಳು.

By : Rekha.M
Online Desk

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆಯೊಂದು ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ಸೋಮವಾರ ನಡೆದಿದೆ.

ಜೇವರ್ಗಿಯಲ್ಲಿ ನಡೆಯುತ್ತಿರವ ವಿಜಯ ಸಂಕಲ್ಪ ರಥಯಾತ್ರೆ ಸಂಬಂಧ ಯಡಿಯೂರಪ್ಪ ಜೇವರ್ಗಿಗೆ ಆಗಮಿಸಿದ್ದರು.

ಹೆಲಿಕಾಪ್ಟರ್​ ಮೂಲಕ ಬಂದ ಬಿಎಸ್​ ಯಡಿಯೂರಪ್ಪ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ಕಾಪ್ಟರ್​ ಲ್ಯಾಂಡ್​​ ಆಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿದ್ದು, ಕೂಡಲೇ ಎಚ್ಚೆತ್ತ ಪೈಲೆಟ್‌ ಹೆಲಿಕಾಪ್ಟರ್​ನ್ನು ಲ್ಯಾಂಡ್​ ಮಾಡದೆ ಬೇರೆಡೆ ತೆಗೆದುಕೊಂಡು ಹೋದರು. ಇದರಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ನಂತರ  ಪೈಲೆಟ್ ಒಂದೆರಡು ಸುತ್ತು ಹೆಲಿಕಾಪ್ಟರ್​ನ್ನು ಆಗಸದಲ್ಲಿಯೇ ಹಾರಾಟ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ಲಾಸ್ಟಿಕ್ ಚೀಲಗಳನ್ನು ತೆರವುಗೊಳಿಸಿದರು. ನಂತರ ಪೈಲೆಟ್ ಹೆಲಿಕಾಪ್ಟರ್'ನ್ನು ಲ್ಯಾಂಡ್​ ಮಾಡಿದರು.​​


Post a Comment

Previous Post Next Post