ಕರ್ನಾಟಕದ ಗಡಿ ಗ್ರಾಮಗಳಲ್ಲಿನ ಆರೋಗ್ಯ ಯೋಜನೆ ಆದೇಶ ಕೂಡಲೇ ಹಿಂಪಡೆಯಿರಿ: ಮಹಾರಾಷ್ಟ್ರಕ್ಕೆ ಸಿಎಂ ಬೊಮ್ಮಾಯಿ

 ಕರ್ನಾಟಕದ ಗಡಿಭಾಗದಲ್ಲಿರುವ 865 ಗ್ರಾಮಗಳಲ್ಲಿ ಆರೋಗ್ಯ ಯೋಜನೆಯಾದ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ (ಎಂಜೆಪಿಜೆಎವೈ) ಜಾರಿಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಒತ್ತಾಯಿಸಿದ್ದಾರೆ.

                                                                ಸಿಎಂ ಬೊಮ್ಮಾಯಿ

By : Rekha.M
Online Desk

ಬೆಂಗಳೂರು: ಕರ್ನಾಟಕದ ಗಡಿಭಾಗದಲ್ಲಿರುವ 865 ಗ್ರಾಮಗಳಲ್ಲಿ ಆರೋಗ್ಯ ಯೋಜನೆಯಾದ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಜಾರಿಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜತೆ ಚರ್ಚಿಸುವುದಾಗಿ ಹೇಳಿದರು.

ಇದೇ ವೇಳೆ ಕರ್ನಾಟಕದ 865 ಹಳ್ಳಿಗಳ ಜನರಿಗೆ ಆರೋಗ್ಯ ವಿಮಾ ಯೋಜನೆಯನ್ನು ಒದಗಿಸುವ ಮಹಾರಾಷ್ಟ್ರ ಸಂಪುಟದ ನಿರ್ಧಾರವನ್ನು ಮುಖ್ಯಮಂತ್ರಿಗಳು ಖಂಡಿಸಿದರು.

ಇದು ಕ್ಷಮಿಸಲಾಗದ ತಪ್ಪು. ಅಮಿತ್ ಶಾ ಅವರೊಂದಿಗಿನ ಗಡಿ ವಿವಾದದ ಕುರಿತು ಇತ್ತೀಚೆಗೆ ನಡೆದ ಸಭೆಯಲ್ಲಿ, ಎರಡೂ ರಾಜ್ಯಗಳು ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪಿನವರೆಗೆ ಕಾಯುವಂತೆ ಮತ್ತು ಯಾವುದೇ ಪ್ರಚೋದನಕಾರಿ ಕ್ರಮಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಆದರೆ, ಮಹಾರಾಷ್ಟ್ರ ಸರ್ಕಾರ ಈ ಸೂಚನೆಯನ್ನು ಉಲ್ಲಂಘಿಸಿದೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಕರ್ನಾಟಕದ ಭಾಗವಾಗಲು ಬಯಸುವ ಹಲವು ಗ್ರಾಮಗಳಿದ್ದು, ಅವರು ತಮ್ಮ ಪಂಚಾಯಿತಿಗಳಲ್ಲಿ ನಿರ್ಣಯವನ್ನು ಕೂಡ ಅಂಗೀಕರಿಸಿದ್ದಾರೆ. "ನಾವು ಕೂಡ ಇಂತಹ ಘೋಷಣೆಗಳನ್ನು ಮಾಡಬಹುದಿತ್ತು. ಮಹಾರಾಷ್ಟ್ರದ ಹಲವಾರು ತಾಲೂಕುಗಳು ಮತ್ತು ಗ್ರಾಮ ಪಂಚಾಯತ್‌ಗಳು ಮಹಾರಾಷ್ಟ್ರದಲ್ಲಿ ನ್ಯಾಯ ಸಿಗದ ಕಾರಣ ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಸರ್ವಾನುಮತದ ನಿರ್ಣಯಗಳನ್ನು ಅಂಗೀಕರಿಸಿವೆ. ಮಹಾರಾಷ್ಟ್ರವು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಚ್ಚರಿಸಿದರು.

ಕರ್ನಾಟಕದ 865 ಹಳ್ಳಿಗಳು ಮತ್ತು ಪಟ್ಟಣಗಳಲ್ಲಿ ಆರೋಗ್ಯ ಯೋಜನೆ ಅನುಷ್ಠಾನಕ್ಕೆ 54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಸೋಮವಾರ ನಿರ್ಧರಿಸಿತ್ತು. ಈ ಮಹಾರಾಷ್ಟ್ರದ ಈ ನಡೆಗೆ ಕಾಂಗ್ರೆಸ್ ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ.

ಕನ್ನಡದ ನೆಲವನ್ನು ರಕ್ಷಿಸಲು ಸಾಧ್ಯವಾಗದ ಬೊಮ್ಮಾಯಿ ಅವರು ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರ.


Post a Comment

Previous Post Next Post