'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದು ಪ್ರಶ್ನಿಸಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ಮಹತ್ವದ ತೀರ್ಪು

 ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ  ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

                                                               ರಾಹುಲ್ ಗಾಂಧಿ

By :Rekha.M
Online Desk

ನವದೆಹಲಿ: ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ ಎಂದು ಪ್ರಶ್ನಿಸಿ ಪರೋಕ್ಷವಾಗಿ ಪ್ರಧಾನಮಂತ್ರಿ ನರೇಂದ್ರ  ಮೋದಿ ವಿರುದ್ಧ ಅವಹೇಳನ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.

‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ವರಿಷ್ಠರೊಬ್ಬರು ರಾಹುಲ್ ಗಾಂಧಿ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡೂ ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದ್ದು, 2 ವರ್ಷ ಜೈಲು ಶಿಕ್ಷೆ ಹಾಗೂ  15 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ಆದರೆ, ರಾಹುಲ್ ಗಾಂಧಿಯವರು ಜಾಮೀನು ಪಡೆದು ಶಿಕ್ಷೆಯಿಂದ ಪಾರಾಗಿದ್ದಾರೆ.

2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.

ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ನ್ಯಾಯಾಲಯ ರಾಹುಲ್​ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.


Post a Comment

Previous Post Next Post