ಲಂಡನ್'ನಲ್ಲಿ ರಾಹುಲ್ ಗಾಂಧಿ ಹೇಳಿಕೆ ದುರಾದೃಷ್ಟಕರ: ಬಿ.ಎಸ್.ಯಡಿಯೂರಪ್ಪ

 ಲಂಡನ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೇಶದ ಕುರಿತು ಮಾತನಾಡಿರುವುದು ದುರಾದೃಷ್ಟಕರ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

                                                             ಬಿಎಸ್.ಯಡಿಯೂರಪ್ಪ

By : Rekha.M
Online Desk

ಬೆಂಗಳೂರು: ಲಂಡನ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ದೇಶದ ಕುರಿತು ಮಾತನಾಡಿರುವುದು ದುರಾದೃಷ್ಟಕರ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ, ಬೇರೊಂದು ದೇಶದಲ್ಲಿ ಪ್ರಮುಖವಾಗಿ ಲಂಡನ್ ನಲ್ಲಿ ಕುಳಿತು ರಾಹುಲ್ ಗಾಂಧಿಯವರು ಈ ರೀತಿಯ ಹೇಳಿಕೆ ನೀಡುತ್ತಾರೆಂದು ಯಾರೂ ನಿರೀಕ್ಷಿಸಿರಲಿಲ್ಲ. ಇದು ದುರಾದೃಷ್ಟಕರ ಸಂಗತಿ. ಅವರ ಹೇಳಿಕೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಳಿಕ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿ, ಪ್ರಧಾನಿ ಮೋದಿಯವರಿಗೆ ನನ್ನ ಮೇಲೆ ವಿಶ್ವಾಸವಿದೆ. ನನಗೆ ಅವರ ಮೇಲೆ ವಿಶ್ವಾಸವಿದೆ. ಮೋದಿಯವರು ಮತ್ತೆ ಪ್ರಧಾನಮಂತ್ರಿಯಾಗುವುದನ್ನು ಖಚಿತಪಡಿಸಲು ರಾಜ್ಯ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ಕೆಲಸ ಮಾಡುತ್ತೇವೆ. ಜನರ ಪ್ರತಿಕ್ರಿಯೆ ಬಿಜೆಪಿ ಪರವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Post a Comment

Previous Post Next Post