ಬೆಳಗಾವಿ: ಕನ್ನಡ ಬಾವುಟ ಬೀಸುತ್ತಿದ್ದ ಯುವಕನ ಮೇಲೆ ಅಪರಿಚಿತ ಗುಂಪಿನಿಂದ ಹಲ್ಲೆ

 ಕುಂದಾನಗರಿ ಬೆಳಗಾವಿ ನಗರದಲ್ಲಿ ಗುರುವಾರ ಸಂಜೆ ನಡೆದ ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಹಾರಿಸುತ್ತಿದ್ದ ಯುವಕನೊಬ್ಬನಿಗೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿದೆ.

                                                                 ಸಾಂದರ್ಭಿಕ ಚಿತ್ರ

By : Rekha.M
Online Desk

ಬೆಳಗಾವಿ: ಕುಂದಾನಗರಿ ಬೆಳಗಾವಿ ನಗರದಲ್ಲಿ ಗುರುವಾರ ಸಂಜೆ ನಡೆದ ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಹಾರಿಸುತ್ತಿದ್ದ ಯುವಕನೊಬ್ಬನಿಗೆ ಅಪರಿಚಿತ ಗುಂಪೊಂದು ಹಲ್ಲೆ ನಡೆಸಿದೆ.

ಬೆಳಗಾವಿ ನಗರದ ರಾಮಲಿಂಗಖಿಂಡ್ ಗಲ್ಲಿಯಲ್ಲಿ ಶೋಭಯಾತ್ರೆ ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿ ಕನ್ನಡ ಧ್ವಜವನ್ನು ಬೀಸುತ್ತಿದ್ದ ವೇಳೆ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿ ಥಳಿಸಿದೆ.

ವ್ಯಕ್ತಿಯ ಬೆನ್ನು ಮತ್ತು ಹೊಟ್ಟೆಗೆ ಗಾಯಗಳಾಗಿವೆ. ಈ ಸಂಬಂಧ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Post a Comment

Previous Post Next Post