ಕಲಬುರಗಿ: ಟ್ರಾಲಿ ಬ್ಯಾಗ್'ಗಳಲ್ಲಿ 34 ಕೆಜಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

 ಟ್ರಾಲಿ ಬ್ಯಾಗ್‌ಗಳಲ್ಲಿ 34 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಲಬುರಗಿ ರೈಲು ನಿಲ್ದಾಣದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

                                                    ವಶಪಡಿಸಿಕೊಂಡಿರುವ ಗಾಂಜಾ.
By : Rekha.M
Online Desk

ಕಲಬುರಗಿ: ಟ್ರಾಲಿ ಬ್ಯಾಗ್‌ಗಳಲ್ಲಿ 34 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳು ಕಲಬುರಗಿ ರೈಲು ನಿಲ್ದಾಣದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿರುವ 34 ಕೆಜಿ ಗಾಂಜಾದ ಮೌಲ್ಯ 25.5 ಲಕ್ಷ ರೂಪಾಯಿ ಆಗಿದೆ ಎಂದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹುಸೇನ್ ಸಾಗರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ  ಸರ್ಕಾರಿ ರೈಲ್ವೆ ಪೊಲೀಸರು ಮತ್ತು ರೈಲ್ವೆ ರಕ್ಷಣಾ ಪಡೆ ಮಾರ್ಚ್ 28ರಂದು ಜಂಟಿ ಕಾರ್ಯಾಚರಣೆ ನಡೆಸಿ ಪ್ಲಾಟ್ ಫಾರಂ 2 ಮತ್ತು 3ರಲ್ಲಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆರೋಪಿಗಳಿಬ್ಬರೂ ಮಹಾರಾಷ್ಟ್ರ ಮತ್ತು ತೆಲಂಗಾಣ ಮೂಲದವರಾಗಿದ್ದು, ಇಬ್ಬರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Post a Comment

Previous Post Next Post