ಶಿವಮೊಗ್ಗ: ನವಜಾತ ಶಿಶುವನ್ನು ಕಚ್ಚಿಕೊಂಡು ಹೋದ ನಾಯಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಘಟನೆ

 ನವಜಾತ ಶಿಶುವನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

                                                               ಮೆಗ್ಗಾನ್ ಆಸ್ಪತ್ರೆ

By : Rekha.M
Online Desk

ಶಿವಮೊಗ್ಗ: ನವಜಾತ ಶಿಶುವನ್ನು ಬೀದಿನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.

ನವಜಾತ ಮೃತ ಹೆಣ್ಣು ಶಿಶುವನ್ನುಶ್ವಾನವೊಂದು ಕಚ್ಚಿಕೊಂಡು ಆಸ್ಪತ್ರೆಯ ಆವರಣದಲ್ಲಿ ಓಡಾಡಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ನವಜಾತ ಶಿಶುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್‌ನ ಆವರಣದಲ್ಲಿ ಓಡಾಡಿದೆ. ಇದನ್ನು ಗಮನಿಸಿದ ನಾಗರಿಕರು ಭದ್ರತಾ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿದ್ದಾರೆ. ನಾಯಿ ಶಿಶುವನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದೆ.

ನಂತರ ಭದ್ರತಾ ಸಿಬ್ಬಂದಿ ವೈದ್ಯರ ಬಳಿ ಶಿಶುವನ್ನು ಕೊಂಡೊಯ್ದಿದ್ದಾರೆ. ತಪಾಸಣೆ ಬಳಿಕ ಶಿಶು ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ. ಜನಿಸಿದ ನಂತರ ಯಾರೋ‌ ಮಗುವನ್ನು ವಾರ್ಡ್ ಹಿಂಭಾಗದಲ್ಲಿ ಬಿಟ್ಟು ಹೋಗಿದ್ದಾರೆ. ನಂತರ ನಾಯಿ ಅದನ್ನು‌ ಕಚ್ಚಿಕೊಂಡು ಓಡಾಡಿದೆ. ಮಗುವನ್ನು ಬಿಟ್ಟು ಹೋದ ಪೋಷಕರ ಪತ್ತೆ ಹೆಚ್ಚುವಂತೆ ಆಸ್ಪತ್ರೆಯ ಸಿಬ್ಬಂದಿ ಆಗ್ರಹಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Post a Comment

Previous Post Next Post