ಶಿವಮೊಗ್ಗ : ವಾಹನಗಳ ತಪಾಸಣೆ ವೇಳೆ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಹಣ ಮತ್ತು ವಸ್ತುಗಳು ಪೊಲೀಸರ ವಶ.

 ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆಯೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಈ ದಿನ ದಿನಾಂಕ 21-04-2023 ರಂದು ಸೂಕ್ತ ದಾಖಲೆಗಳಿಲ್ಲದೇ ವಾಹನಗಳಲ್ಲಿ ಸಾಗಾಟ ಮಾಡುತ್ತಿದ್ದ ಮತ್ತು ಸಂಗ್ರಹಿಸಿಟ್ಟಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.


1. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ, ಅಂದಾಜು ಮೌಲ್ಯ 65.56.550/- ರೂಗಳ, 206 ಚೀಲಗಳಲ್ಲಿದ್ದ ಒಟ್ಟು 144 ಕ್ವಿಂಟಾಲ್ ಅಡಿಕೆಯನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.

2. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ, ಅಂದಾಜು ಮೌಲ್ಯ 3.72.945/- ರೂ ಗಳ ಹಾರ್ಡ್ ವೇರ್ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.

3. ಶಿರಾಳಕೊಪ್ಪ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೆ ಸಂಗ್ರಹಿಸಿಟ್ಟಿದ್ದ ಅಂದಾಜು ಮೌಲ್ಯ  14.00.000/- ರೂ ಗಳ ಸೀರೆ ಮತ್ತು ಬಟ್ಟೆಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.


Post a Comment

Previous Post Next Post