ಫುಡ್​ ಕಿಟ್​ ಹಂಚಿಕೆ ಆರೋಪ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್​ಐಆರ್ ದಾಖಲು

 ಜನರಿಗೆ ಫುಡ್​ ಕಿಟ್​ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

                                                            ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ

By : Rekha.M

Online Desk

ಬೆಂಗಳೂರು: ಜನರಿಗೆ ಫುಡ್​ ಕಿಟ್​ ಹಂಚಿಕೆ ಮಾಡುತ್ತಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಹೆಸರಿನಲ್ಲಿ ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಫುಡ್​ ಕಿಟ್​ ಹಂಚಿಕೆ ಆರೋಪ ಕೇಳಿ ಬಂದಿದ್ದು, ಕಿಟ್​ ಹಂಚಿಕೆ ವೇಳೆ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು, ಪೊಲೀಸರು ದಾಳಿ ಮಾಡಿದ್ದು, ಈ ವೇಳೆ 7 ಲಕ್ಷಕ್ಕೂ ಅಧಿಕ ಮೌಲ್ಯದ ಫುಡ್​​​ ಕಿಟ್​ಗಳನ್ನು ಜಪ್ತಿ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಕೃಷ್ಣಯ್ಯ ಶೆಟ್ಟಿ ಅವರು ಗಾಂಧಿನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಕೃಷ್ಣಯ್ಯ ಶೆಟ್ಟಿಗೆ ನೊಟೀಸ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.Post a Comment

Previous Post Next Post