ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು

 ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

                                                                   ಕಿಚ್ಚ ಸುದೀಪ್

By : Rekha.M
Online Desk

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ಈ ಮಧ್ಯೆ ನಿನ್ನೆ ಅವರು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದ ನಂತರ ಶಿವಮೊಗ್ಗ ಮೂಲದ ಅಡ್ವೊಕೇಟ್ ಕೆ ಪಿ ಶ್ರೀಪಾಲ ಚುನಾವಣಾಧಿಕಾರಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ನಟ ಸುದೀಪ್ ಅವರ ಚಿತ್ರಗಳು, ಟಿ ವಿಶೋಗಳು, ಜಾಹೀರಾತುಗಳನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರಸಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. 

ಸುದೀಪ್ ಅವರ ಟಿವಿ ಶೋಗಳು, ಚಿತ್ರಗಳನ್ನು ಪ್ರಸಾರ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಪ್ರಸಾರ ಮಾಡಿದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ಚುನಾವಣೆ ಮುಗಿಯುವವರೆಗೆ ಪ್ರಸಾರಕ್ಕೆ ತಡೆಯೊಡ್ಡಬೇಕೆಂದು ಮನವಿ ಮಾಡಿದ್ದಾರೆ.


Post a Comment

Previous Post Next Post