ಹೈಕಮಾಂಡ್ ಆದೇಶ ಪಾಲಿಸುತ್ತೇನೆ, ಅಭ್ಯರ್ಥಿಗಳ ಆಯ್ಕೆಯಲ್ಲಿ ಗುಜರಾತ್ ಮಾದರಿ ಅನುಸರಿಸಿಲ್ಲ: ಕೆಎಸ್ ಈಶ್ವರಪ್ಪ

 ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪಕ್ಷದ ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದು ಬುಧವಾರ ಹೇಳಿದ್ದಾರೆ.

                                                              ಕೆ.ಎಸ್ ಈಶ್ವರಪ್ಪ

By : Rekha.M

ಶಿವಮೊಗ್ಗ: ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪಕ್ಷದ ಹೈಕಮಾಂಡ್ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದು ಬುಧವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಈಶ್ವರಪ್ಪ ಅವರು, ಹೈಕಮಾಂಡ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಯಾವುದೇ ವ್ಯಕ್ತಿಯಿಂದ ಶಕ್ತಿ ಪಡೆದಿಲ್ಲ, ಅಭ್ಯರ್ಥಿಗಳ ಆಯ್ಕೆಯಲ್ಲಿ ಗುಜರಾತ್ ಮಾದರಿಯನ್ನು ಪಕ್ಷ ಅನುಸರಿಸಿಲ್ಲ ಎಂದರು.
ಬಿಜೆಪಿಯ ಮೊದಲ ಪಟ್ಟಿಯನ್ನು ನೋಡಿದ ನಂತರ, ಪ್ರತಿಪಕ್ಷ ಕಾಂಗ್ರೆಸ್‌ಗೆ ಕಸಿವಿಸಿಯಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಜನ ಆರಿಸುತ್ತಾರೆ ಎಂದರು.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಘೋಷಣೆಗೂ ಮುನ್ನವೇ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ಬಿಜೆಪಿಯಲ್ಲಿ ಕುರುಬ ಸಮುದಾಯದ ಪ್ರಮುಖ ನಾಯಕರಾಗಿರುವ ಈಶ್ವರಪ್ಪ ಅವರು ಕಟ್ಟಾ ಹಿಂದುತ್ವವಾದಿ ನಾಯಕರೂ ಹೌದು. ಕೆಂಪು ಕೋಟೆಯ ಮೇಲೆ ಭಗವಾ ಧ್ವಜಾರೋಹಣ, ಆಜಾನ್ ಮತ್ತು ಅಲ್ಪಸಂಖ್ಯಾತರ ವಿರೋಧಿ ವಿಶೇಷವಾಗಿ ಮುಸ್ಲಿಂ ಮೂಲಭೂತವಾದದ ವಿರುದ್ಧ ಅವರು ನೀಡಿರುವ ಹೇಳಿಕೆಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿವೆ.

ಮೂಲಗಳ ಪ್ರಕಾರ, ಈಶ್ವರಪ್ಪ ಮತ್ತು ಯಡಿಯೂರಪ್ಪ ಸಮಕಾಲೀನರು. ಯಡಿಯೂರಪ್ಪ ಅವರಿಗೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಲು ಅವಕಾಶ ನಿರಾಕರಿಸಿದಾಗ, ಈಶ್ವರಪ್ಪ ಅವರಿಗೆ ಈ ಬಾರಿ ಟಿಕೆಟ್ ಸಿಗುವ ಸಾಧ್ಯತೆ ಇರಲಿಲ್ಲ.

ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದ ಕೆಎಚ್ ಶ್ರೀನಿವಾಸ್ ಅವರನ್ನು ಸೋಲಿಸುವ ಮೂಲಕ ಈಶ್ವರಪ್ಪ ಅಬ್ಬರದಿಂದಲೇ ತಮ್ಮ ರಾಜಕೀಯ ಜೀವನ ಆರಂಭಿಸಿದ್ದರು. 

ಗುತ್ತಿಗೆದಾರ ಹಾಗೂ ಬಿಜೆಪಿ ಮುಖಂಡ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಈಶ್ವರಪ್ಪ ರಾಜೀನಾಮೆ ನೀಡಬೇಕಾಯಿತು. ಆದರೆ, ನಂತರದ ತನಿಖೆಯಲ್ಲಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿತ್ತು.

ಕ್ಲೀನ್ ಚಿಟ್ ಇದ್ದರೂ ಈಶ್ವರಪ್ಪ ಅವರಿಗೆ ಮತ್ತೆ ಸಂಪುಟ ಸೇರಲು ಸಾಧ್ಯವಾಗಲಿಲ್ಲ. ಅವರ ಸೇವೆಯನ್ನು ಸಂಘಟನಾ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಪಕ್ಷ ಚಿಂತನೆ ನಡೆಸಿದೆ ಎನ್ನಲಾಗಿದೆ.


Post a Comment

Previous Post Next Post