ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಸಿಎಂ ಬೊಮ್ಮಾಯಿ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬೊಮ್ಮಾಯಿಯವರು ಅಪಾಯದಿಂದ ಪಾರಾಗಿದ್ದಾರೆ.

                                                            ಸಿಎಂ ಬೊಮ್ಮಾಯಿ

By :Rekha.M
Online Desk

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಬೊಮ್ಮಾಯಿಯವರು ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು, ಬಳಿಕ ಅರೆಶಿರೂರು ಹೆಲಿಪ್ಯಾಡ್ ಮೂಲಕ ಮುಖ್ಯಮಂತ್ರಿಗಳು ಕೊಲ್ಲೂರಿಗೆ ತೆರಳಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಇದರ ಬೆನ್ನಲ್ಲೆ ಸಿಎಂ ಬೊಮ್ಮಾಯಿ ಅವರು ಟೆಂಪಲ್ ರನ್ ಶುರು ಮಾಡಿದ್ದಾರೆ.

ಇದರಂತೆ ಇಂದು ಉಡುಪಿಗೆ ಭೇಟಿ ನೀಡಿದ್ದು ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಆತಂಕ ಸೃಷ್ಟಿಯಾಗಿದ್ದು. ಅದೃಷ್ಟವಶಾತ್ ಸಿಎಂ ಬೊಮ್ಮಾಯಿ ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.

ಇದೀಗ ಸಿಎಂ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ನಟ ರಿಷಬ್ ಶೆಟ್ಟಿ ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಆಕಸ್ಮಿಕವಾಗಿ ಇಬ್ಬರ ಭೇಟಿ ಆಗಿದೆ. ಮುಖ್ಯಮಂತ್ರಿಗಳನ್ನು ನೋಡುತ್ತಿದ್ದಂತೆಯೇ ನಟ ರಿಷಬ್ ಅವರು ಕಾಲು ಮುಟ್ಟಿ ಆಶೀರ್ವಾದ ಪಡೆದರು. ಈ ವೇಳೆ ಮುಖ್ಯಮಂತ್ರಿಗಳು ರಿಷಬ್ ಅವರ ಬೆನ್ನು ತಟ್ಟಿ ಖುಷಿ ಪಟ್ಟರು.
    Post a Comment

    Previous Post Next Post