ಕೊನೆಗೂ ಶಿವಮೊಗ್ಗ, ಮಾನ್ವಿ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, ಈಶ್ವರಪ್ಪ ಕುಟುಂಬಕ್ಕಿಲ್ಲ ಟಿಕೆಟ್

 ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

                                                                     ಕೆಎಸ್ ಈಶ್ವರಪ್ಪ

By : Rekha.M
Online Desk

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಇತ್ತೀಚಿಗಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ.

ಈ ಮುಂಚೆ ಮೂರು ಹಂತಗಳಲ್ಲಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಶಿವಮೊಗ್ಗ ಮತ್ತು ಮಾನ್ವಿ ಕ್ಷೇತ್ರಗಳ ಅಭ್ಯರ್ಥಿಗಳನ್ನು ಮಾತ್ರ ಬಾಕಿ ಉಳಿಸಿಕೊಂಡಿತ್ತು. ಇಂದು ರಾತ್ರಿ ಆ ಎರಡು ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಶಿವಮೊಗ್ಗದಿಂದ ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಿದೆ.

ಇನ್ನು ನಿನ್ನೆಯಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಸಂಸದ ಬಿವಿ ನಾಯಕ್ ಅವರಿಗೆ ಮಾನ್ವಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.


Post a Comment

Previous Post Next Post