ಮೇ 10ರ ಬಳಿಕ ಎಸ್ಎಸ್ಎಲ್'ಸಿ ಪರೀಕ್ಷೆ ಫಲಿತಾಂಶ ಪ್ರಕಟ

 ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್ಎಸ್ಎಲ್'ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

                                                                 ಸಂಗ್ರಹ ಚಿತ್ರ

Posted By :Rekha.M
Online Desk

ಬೆಂಗಳೂರು: ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್ಎಸ್ಎಲ್'ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮೌಲ್ಯಮಾಪನದ ನಂತರದ ಕಾರ್ಯ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ)ಯ ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಿರುವುದರಿಂದ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತ ಮಂಡಳಿ ಕಾಯಬೇಕಾಗಿದೆ. ಹೀಗಾಗಿ ಫಲಿತಾಂಶ ಸಿದ್ಧವಾಗಿದ್ದರೂ ಮತದಾನ ಪೂರ್ಣಗೊಳ್ಳುವವರೆಗೆ ಕಾಯಬೇಕಿದೆ.

ಈ ನಡುವೆ ಚುನಾವಣೆ ಪೂರ್ಣಗೊಂಡ ಬಳಿಕ ಮೇ.11 ಅಥವಾ 12 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.Post a Comment

Previous Post Next Post