ರಾಜ್ಯ ವಿಧಾನಸಭಾ ಚುನಾವಣೆ 2023: ಮತದಾನಕ್ಕೆ ಕ್ಷಣಗಣನೆ, ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ, ಹಿಂದೆಂದೂ ಕೈಗೊಳ್ಳದಷ್ಟು ಭಾರಿ ಭದ್ರತೆ

 ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.

                                                                        ಸಂಗ್ರಹ ಚಿತ್ರ

Posted By : Rekha.M
Online Desk

ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.

ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಿಗೆ ಪೊಲೀಸ್ ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸಿಎಪಿಎಫ್​ ಕಂಪನಿಗಳನ್ನು ನಿಯೋಜಿಸಲಾಗಿದೆ.

ರಾಜ್ಯದ ಕಮಿಷನರೇಟ್‌ಗಳಲ್ಲಿ ಕಮಿಷನ್‌ರ್‌ಗಳು, ಜಿಲ್ಲೆಗಳಲ್ಲಿ ಎಸ್‌ಪಿಗಳು ಚುನಾವಣಾ ನಿಗಾ ವಹಿಸಲಿದ್ದಾರೆ. ಚುನಾವಣಾ ಭದ್ರತೆಗೆ 304 ಡಿವೈಎಸ್‌ಪಿಗಳು, 991 ಇನ್‌ಸ್ಪೆಕ್ಟರ್‌ಗಳು, 2,610 ಮಂದಿ ಸಬ್ ಇನ್‌ಸ್ಪೆಕ್ಟರ್‌ಗಳು, 5,803 ಎಎಸ್‌ಐಗಳು, 46,421 ಮುಖ್ಯಪೇದೆಗಳು, 27,990 ಮಂದಿ ಹೋಮ್ಗಾರ್ಡ್‌ಗಳು ಸೇರಿ 84,119 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.


Post a Comment

Previous Post Next Post