ಕಾಂಗ್ರೆಸ್ ಸರ್ಕಾರ ಬರ್ತಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ: ಬೆಸ್ಕಾಂ ಸಿಬ್ಬಂದಿ ಮುಂದೆ ಪಟ್ಟುಹಿಡಿದ ಗ್ರಾಮಸ್ಥರು!

 ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅದರಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೂಡ ಒಂದು. ಈಗ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ಗೆ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ.

                                           ಬೆಸ್ಕಾಂ ಸಿಬ್ಬಂದಿ ಮುಂದೆ ಗ್ರಾಮಸ್ಥರ ಪಟ್ಟು

Posted By : Rekha.M
Source : Online Desk

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅದರಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೂಡ ಒಂದು. ಈಗ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ಗೆ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ. 

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದೆ ಹೀಗಾಗಿ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮಸ್ಥರು ಪಟ್ಟು ಹಿಡಿದು ಕುಳಿತಿದ್ದಾರೆ.

ಸರ್ಕಾರದ ಆದೇಶ ಬರಬೇಕಷ್ಟೆ, ಅಲ್ಲಿಯವರೆಗೆ ಕಟ್ಟಬೇಕಾಗುತ್ತದೆ ಎಂದು ಬೆಸ್ಕಾಂ ಸಿಬ್ಬಂದಿ ಹೇಳುತ್ತಿದ್ದರೂ ಗ್ರಾಮಸ್ಥರು ಕೇಳುವ ಸ್ಥಿತಿಯಲ್ಲಿಲ್ಲ, ಇಲ್ಲ ನಾವು ಕಟ್ಟಲ್ಲ, ಬೇಕಾದ್ರೆ ಸರ್ಕಾರದವರನ್ನೇ ಕೇಳಿ ಹೋಗಿ ಎಂದು ಆವಾಜ್ ಹಾಕುತ್ತಿರುವ ದೃಶ್ಯ ಕಂಡುಬಂತು.


Post a Comment

Previous Post Next Post