ಫಲಿಸದ ತಾಯಿಯ ಕ್ಷೇತ್ರ ತ್ಯಾಗ: ತಂದೆಯ ಭದ್ರಕೋಟೆಯಲ್ಲೇ ಸೋತ ಮಗ; ಎಲ್ಲಿಯೂ ಸಲ್ಲದ ನಿಖಿಲ್ ಕುಮಾರಸ್ವಾಮಿ!

 ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

                                                                ನಿಖಿಲ್ ಕುಮಾರಸ್ವಾಮಿ

Posted By : Rekha.M
Source : Online Desk

ರಾಮನಗರ: ರಾಮನಗರ ವಿಧಾನಸಭೆಯ ಫಲಿತಾಂಶ ಹೊರಬಿದ್ದಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್ ಜಯ ಭಾರಿಸಿದ್ದಾರೆ.

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದರು. ಇದೀಗ ಮಗನಿಗಾಗಿ ತಾಯಿ ಮಾಡಿದ ತ್ಯಾಗ ಫಲಿಸಿಲ್ಲ. ರಾಮನಗರ ವಿಧಾನಸಭಾ ಕ್ಷೇತ್ರದಿಂದ  ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಳಪತಿಯ ಕುಡಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಬಿಜೆಪಿಯಿಂದ ಗೌತಮ್ ಗೌಡ ಸ್ಪರ್ಧಿಸಿದ್ದರು

ಲೋಕಸಭಾ ಚುನಾವಣೆಗೆಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಗೆದ್ದಿದ್ದರು.


Post a Comment

Previous Post Next Post