ರಾಮ ಮಂದಿರ ಜನವರಿಯಲ್ಲಿ ಉದ್ಘಾಟನೆ; ಮೂಲಸೌಕರ್ಯ ಕಾಮಗಾರಿ ಚುರುಕು

 ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿನ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ವಿಸ್ತರಣೆ ಸೇರಿದಂತೆ ಮೂಲಸೌಕರ್ಯ ಕಾಮಗಾರಿ ಚುರುಕುಗೊಳಿಸಿದ್ದು, ಮುಂದಿನ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಉದ್ಘಾಟಿಸಲು ಸಿದ್ಧತೆ...

                                                         ರಾಮ ಮಂದಿರದ ಮಾದರಿ

Posted By :Rekha.M
Online Desk

ಲಖನೌ: ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯಲ್ಲಿನ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ವಿಸ್ತರಣೆ ಸೇರಿದಂತೆ ಮೂಲಸೌಕರ್ಯ ಕಾಮಗಾರಿ ಚುರುಕುಗೊಳಿಸಿದ್ದು, ಮುಂದಿನ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಉದ್ಘಾಟಿಸಲು ಸಿದ್ಧತೆ ನಡೆಸುತ್ತಿದೆ ಎಂದು ಪ್ರಕಟಣೆಯೊಂದು ತಿಳಿಸಿದೆ.

ಸಹದತ್‌ಗಂಜ್‌ನಿಂದ ನಯಾ ಘಾಟ್‌ವರೆಗಿನ 13 ಕಿಮೀ ರಸ್ತೆಯ ರಾಮ್ ಪಥ್‌ನ ಕಾಮಗಾರಿಯು ಪ್ರಗತಿಯಲ್ಲಿದೆ. ರಾಮಜಾನಕಿ ಪಥ ಮತ್ತು ಭಕ್ತಿ ಪಥ ನಿರ್ಮಾಣದ ರೂಪುರೇಷೆಯೂ ಸಿದ್ಧವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಸಹ ವಿಸ್ತರಿಸಲಾಗುತ್ತಿದೆ ಎಂದು ಸರ್ಕಾರಿ ಅಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.

ರಾಮ ಜನ್ಮಭೂಮಿ ಪಥದ ಅಗಲ 30 ಮೀಟರ್ ಮತ್ತು ಭಕ್ತಿ ಪಥದ ಅಗಲ 14 ಮೀಟರ್ ಆಗಿದೆ. ಈ ರಸ್ತೆ ಕಾರಿಡಾರ್‌ಗಳು ಶ್ರೀರಾಮ ಜನ್ಮಭೂಮಿ ಮತ್ತು ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭಕ್ತರ ಸಂಚಾರಕ್ಕೆ ಅನುಕೂಲವಾಗುವುದರಿಂದ ಇವುಗಳ ಕೆಲಸ ಮುಗಿಸುವುದು ಪ್ರಮುಖವಾಗಿವೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಮಂದಿರ ಉದ್ಘಾಟನೆಗೆ ಬರುವಂತೆ ದೇಶದ ಜನರನ್ನು ಆಹ್ವಾನಿಸಿದ್ದಾರೆ ಮತ್ತು ಅವರು ವಿವಿಧ ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸುತ್ತಿದ್ದಾರೆ ಎಂದು ಪ್ರಕಟಣೆ ಹೇಳಿದೆ.

Post a Comment

Previous Post Next Post