ಐದು ಗ್ಯಾರಂಟಿ ಘೋಷಣೆ: ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ

 ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

                                              ಮುಖ್ಯಮಂತ್ರಿ ಸಿದ್ದರಾಮಯ್ಯ

Posted By :Rekha.M
Online Desk

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಮೊದಲ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆಯನ್ನು ಜುಲೈ 1 ರಿಂದ  ಜಾರಿ ಮಾಡಲಾಗುವುದು ಎಂದರು. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ ಶೇ. 10 ರಷ್ಟು ಹೆಚ್ಚು 200 ಯೂನಿಟ್ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು ಎಂದರು.

ಈ ಹಿಂದಿನ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು.ಜುಲೈ ತಿಂಗಳ ವಿದ್ಯುತ್ ಪಾವತಿಸಬೇಕಾಗಿಲ್ಲ, ಯಾವುದೇ ಜಾತಿ, ಧರ್ಮಗಳ ತಾರತಮ್ಯ ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಎಂದ ಸಿದ್ದರಾಮಯ್ಯ, ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಎರಡನೇ ಯೋಜನೆ 'ಗೃಹಲಕ್ಷ್ಮಿ'ಯನ್ನು ಆಗಸ್ಟ್ 15 ರಂದು ಅನುಷ್ಠಾನಕ್ಕೆ ತರಲಾಗುವುದು, ಈ ಯೋಜನೆಯಡಿ ಬಿಪಿಎಲ್ , ಎಪಿಎಲ್ ಖಾತೆದಾರರ ಮನೆ ಯಜಮಾನಿ ಖಾತೆಗೆ ಹಣ ಮಾಡಲಾಗುವುದು, ಆದರೆ, ಇಂತಹ ಫಲಾನುಭವಿಗಳು ಜೂನ್ 15 ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕು ಎಂದರು. ಪಿಂಚಣಿ ಫಲಾನುಭವಿಗಳಿಗೂ ಈ ಯೋಜನೆ ಅನ್ವಯವಾಗಲಿದೆ ಎಂದರು.

3ನೇ ಗ್ಯಾರಂಟಿ ಅನ್ನಭಾಗ್ಯ ಯೋಜನೆಯಡಿ ಜುಲೈ 1 ರಿಂದ ಎಲ್ಲಾ ಬಿಪಿಎಲ್ ಕಾರ್ಡ್ ದಾರರು ಮತ್ತು ಅಂತ್ಯೋದಯ ಫಲಾನುಭವಿಗಳಿಗೆ ತಲಾ 10  ಕೆಜಿ ಅಕ್ಕಿ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

4ನೇ ಗ್ಯಾರಂಟಿ  ಶಕ್ತಿ: ವಿದ್ಯಾರ್ಥಿನಿಯರು ಸೇರಿದಂತೆ ಸಮಾಜದಲ್ಲಿನ ಎಲ್ಲಾ ಮಹಿಳೆಯರು ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ  ಈ ತಿಂಗಳು 11 ನೇ ತಾರೀಖು ಚಾಲನೆ ನೀಡಲಾಗುವುದು,  ಈ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಯೋಜನೆಗೆ ಚಾಲನೆ ನ ಚಾಲನೆ ನೀಡಲಿದ್ದೇವೆ.  ಬೆಂಗಳೂರಿನಿಂದ ತಿರುಪತಿ, ಬೆಂಗಳೂರಿನಿಂದ ಹೈದರಾಬಾದ್‌ಗೆ ಅವಕಾಶ ವಿಲ್ಲ. ರಾಜ್ಯದ ಒಳಗೆ ಮತ್ತು ಕರ್ನಾಟಕದವರಿಗೆ ಉಚಿತ ಪ್ರಯಾಣ. ಐಷಾರಾಮಿ, ಎಸಿ ಮತ್ತು ನಾನ್ ಎಸಿ ಸ್ಲೀಪರ್ ಬಸ್‌ಗಳಲ್ಲಿ ಉಚಿತ ಪ್ರಯಾಣವಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. 

5ನೇ ಗ್ಯಾರಂಟಿ ಯುವನಿಧಿ: 2022-23ರಲ್ಲಿ ಪಾಸ್ ಆದ ಪದವೀಧರ ನಿರುದ್ಯೋಗಿಗಳಿಗೆ ನೋಂದಣಿಯಾದ 24 ತಿಂಗಳ ವರಗೆ ಪ್ರತಿ ತಿಂಗಳಿಗೆ 3,000 ಮತ್ತು ಡಿಪ್ಲೋಮಾ ಮಾಡಿದವರಿಗೆ 1, 1500 ಗೌರವ ಧನ ನೀಡಲಾಗುವುದು ಎಂದ ಮುಖ್ಯಮಂತ್ರಿ ತಿಳಿಸಿದರು. ವೃತ್ತಿಪರ ಶಿಕ್ಷಣ ಸೇರಿದಂತೆ ಎಲ್ಲಾ ಪದವೀಧರ ನಿರುದ್ಯೋಗಿಗಳಿಗೆ ಇದು ಅನ್ವಯವಾಗಲಿದೆ. ತೃತೀಯ ಲಿಂಗಿಗಳಿಗೂ ಕೂಡಾ ಈ ಯೋಜನೆ ಅನ್ವಯ ನಿರುದ್ಯೋಗ ಭತ್ಯೆ ನೀಡಲಾಗುವುದು, ಇದಕ್ಕಾಗಿ ಅರ್ಜಿ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಪಪಡಿಸಿದರು.

Post a Comment

Previous Post Next Post