ಶಿವಮೊಗ್ಗ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಫೋನ್ ಕಳವು; ತನಿಖೆ ನಡೆಸಿ 3.25.000/- ರೂಗಳ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸ್ ತನಿಖಾ ತಂಡ.

 ದಿನಾಂಕ 17-05-2023 ರಂದು ರಾತ್ರಿ ಶಿವಮೊಗ್ಗ ಸ್ವಾಮಿವಿವೇಕಾನಂದ ಬಡಾವಣೆಯ ವಾಸಿ 29 ವರ್ಷದ ವ್ಯಕ್ತಿಯೊಬ್ಬರು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಳ ಗೌಡ ಬಡಾವಣೆಯ ಚಂದನ ಪಾರ್ಕ್ ನ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಒಂದೇ ಬೈಕಿನಲ್ಲಿ ಬಂದ ಯಾರೋ 3 ಜನರು ಆ ವ್ಯಕ್ತಿಯ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 219/2023 ಕಲಂ 392  ಐಪಿಸಿ ರೀತ್ಯಾ ಸುಲಿಗೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿರುತ್ತದೆ.


ಪ್ರಕರಣದ ಆರೋಪಿತರ ಪತ್ತೆ ಬಗ್ಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ರವರ ಮುಂದಾಳತ್ವದಲ್ಲಿ, ಶ್ರೀ ಮಂಜುನಾಥ್ ಪಿ.ಐ ತುಂಗಾನಗರ ಪೊಲೀಸ್ ಠಾಣೆ ರವರ ನೇತೃತ್ವದ. ಶ್ರೀ ರಾಜುರೆಡ್ದಿ ಬಿ, ಪಿಎಸ್ಐ ಹಾಗೂ ಸಿಬ್ಬಂದಿಯವರಾದ ಹೆಚ್ ಸಿ  ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ಸಿಪಿಸಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ರವರುಗಳನ್ನೊಳಗೊಂದ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ದಿನಾಂಕ 02-06-2023 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ 03 ಜನ ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ವಶಕ್ಕೆ ಪಡೆದು, ಅವರುಗಳಿಂದ ತುಂಗಾನಗರ ಪೊಲೀಸ್ ಠಾಣೆಯ 01, ದೊಡ್ಡಪೇಟೆ ಪೊಲೀಸ್ ಠಾಣೆಯ 01 ಮತ್ತು ವಿನೋಬನಗರ ಪೊಲೀಸ್ ಠಾಣೆಯ 01 ಪ್ರಕರಣ ಸೇರಿದಂತೆ ಒಟ್ಟು 03 ಸುಲಿಗೆ ಪ್ರಕರಣಗಳಿಗೆ ಸಂಬಧಿಸಿದ ಅಂದಾಜು ಮೌಲ್ಯ 3.25.000/- ರೂ ಗಳ ಒಟ್ಟು 23 ವಿವಿಧ ಕಂಪನಿಯ ಮೊಬೈಲ್ ಫೋನ್ ಗಳೂ ಮತ್ತು  ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ.


Post a Comment

Previous Post Next Post