ಶಕ್ತಿ ಯೋಜನೆ ಫ್ರೀ ಬಸ್ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್

 ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

                                                  ಕಣ್ಣೀರಿಟ್ಟ ಆಟೋ ಚಾಲಕ

Posted By :Rekha.M
Source : Online Desk

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ಹೌದು.. ರಾಜಧಾನಿ ಬೆಂಗಳೂರಿನಲ್ಲಿ ಶಕ್ತಿಯೋಜನೆ ಜಾರಿ ಬಳಿಕ ಆಟೋ ಚಾಲಕರು ಪ್ರಯಾಣಿಕರಿಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ಇದೀಗ ಆಟೋ ಚಾಲಕರು ಕಣ್ಣೀರು ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. 
Post a Comment

Previous Post Next Post