ಚುನಾವಣೆ ವೇಳೆ ಕನ್ನಡಿಗರಿಗೆ ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ದ್ವೇಷ ಸಾಧಿಸುತ್ತಿದೆ: ಕಾಂಗ್ರೆಸ್ ಕಿಡಿ

 ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಆಶೀರ್ವಾದ ಕಳೆದುಕೊಳ್ಳುವಿರಿ ಎಂದು ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

                                                                      ಸಾಂದರ್ಭಿಕ ಚಿತ್ರ

Posted By : Rekha.M
Source : Online Desk

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಆಶೀರ್ವಾದ ಕಳೆದುಕೊಳ್ಳುವಿರಿ ಎಂದು ಬೆದರಿಕೆ ಹಾಕಿದ್ದ ಬಿಜೆಪಿ ಈಗ ಅಕ್ಕಿ ಕೊಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. 

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್,ಕೇಂದ್ರ ಸರ್ಕಾರದ ಧೋರಣೆಯು ಒಕ್ಕೂಟ ವ್ಯವಸ್ಥೆಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಆರೋಪಿಸಿದೆ.ರಾಜ್ಯಗಳಿಂದಲೇ ಸಂಗ್ರಹಿಸಿದ ಅಕ್ಕಿಯನ್ನು ರಾಜ್ಯಗಳಿಗೆ ಕೊಡುವುದಿಲ್ಲ ಎಂದರೆ ಏನರ್ಥ? ಎಂದು ಪ್ರಶ್ನಿಸಿದೆ.

ಬಿಜೆಪಿ ಪ್ರತಿಭಟಿಸುತ್ತಿರುವುದು ಯಾವ ಕಾರಣಕ್ಕೆ ಎಂಬುದು ಅವರಿಗೇ ಸ್ಪಷ್ಟತೆ ಇದ್ದಂತಿಲ್ಲ!ಪ್ರತಿಭಟಿಸುವುದಿದ್ದರೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ ಎಂದು ತಾಕೀತು ಮಾಡಿದೆ.Post a Comment

Previous Post Next Post