ಗ್ಯಾರಂಟಿ ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಅಧಿಕಾರ ಬಿಟ್ಟು ತೊಲಗಲಿ: ಯಡಿಯೂರಪ್ಪ ಗುಡುಗು

ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ.

                                                          ಬಿ.ಎಸ್ ಯಡಿಯೂರಪ್ಪ

Posted By : Rekha.M
Source : Online Desk

ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ಸರ್ಕಾರ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ನಗರದ ಅಭಿನವ ರೇಣುಕಾಮಂದಿರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ಜನರನ್ನು ಮರಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನ ಕೇಳಿ ಜನರಿಗೆ ಭರವಸೆ ಕೊಟ್ಟಿದ್ದರಾ?. ಚುನಾವಣೆಯಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್​ನವರೇ ಭರವಸೆ ಕೊಟ್ಟಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ‌ ಕೊಡ್ತಿದೆ. ಜನರಿಗೆ ಭರವಸೆ ಕೊಟ್ಟಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಬೇಕು. 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಬಿಎಸ್​ವೈ ಹರಿಹಾಯ್ದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿ ಬಿಜೆಪಿಯನ್ನು ರೈತರಪರ ಬಡವರ ಪರ ಬೆಳೆಸಿದವರು ಮಾಜಿ ಸಿಎಂ ಯಡಿಯೂರಪ್ಪ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭರವಸೆ ಈಡೇರಿಸದಿದ್ದರೆ ವಿಧಾನಸಭೆ ಮುಂದೆ ಧರಣಿ ನಡೆಸುವುದಾಗಿ ಬಿಎಸ್‌ವೈ ಹೇಳಿದ್ದಾರೆ.

ಅದಕ್ಕಾಗಿ ರಾಜ್ಯದಲ್ಲಿ ಏಳು ತಂಡಗಳು ಪ್ರವಾಸ ಕೈಗೊಂಡಿದೆ. ರಾಜ್ಯ ಸರ್ಕಾರದ ಐದು ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿ ಏಳು ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಧರಣಿ ನಡೆಲಾಗುವುದು ಎಂದರು.


Post a Comment

Previous Post Next Post