ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಎಸ್. ಸುಂದರೇಶ್ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

 

ಶಿವಮೊಗ್ಗ ಹಾಗೂ ಹೊಸನಗರದಲ್ಲಿ ಎರೆಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು ಇದು ಅತ್ಯಂತ ಹೇಯಕೃತ್ಯ ಈ ವಿಚಾರವನ್ನು ಖಂಡಿಸುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಾಗೂ ರಾಜ್ಯ ಸರ್ಕಾರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮನವಿ ಮಾಡುತ್ತೇವೆ ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಅಪ್ರಾಪ್ತ ಬಾಲಕೀಯ ಪೋಷಕರು ಆತಂಕಕ್ಕೆ ಒಳಗಾಗಬಾರದು. ಪೊಲೀಸರು ಕೂಡ ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸಬೇಕು ಹಾಗೂ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಬಾರದು. ಈ ಪ್ರಕರಣದಲ್ಲಿ ಎಂತ ಪ್ರಬಲ ವ್ಯಕ್ತಿಗಳಾದರು ಅವರಿಗೆ ಕಠಿಣ ಶಿಕ್ಷೆ ಆಗಬೇಕು ಜೊತೆಗೆ ನ್ಯಾಯಾ ದೊರಕುವ ವರೆಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ನೊಂದ ಬಾಲಕೀಯರ ಪರ ಇರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಹೆಚ್. ಎಸ್. ಸುಂದರೇಶ್ ರವರು ತಿಳಿಸಿದರು.


Post a Comment

Previous Post Next Post