ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಯಾರಿಗೆ ಟಿಕೆಟ್?


 ಶಿವಮೊಗ್ಗ ಲೋಕಸಭಾ ಚುನಾವಣೆಯ ಹತ್ತಿರ ಬಂದಂತೆ ಕಾಂಗ್ರೆಸ್ ಪಕ್ಷದಲ್ಲಿ ಯಾರಿಗೆ ಟಿಕೆಟ್ ಎಂಬ ಕುತೂಹಲ ಮೂಡಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ಎಸ್ ಸುಂದರೇಶ್ ಅಥವಾ. ಗೀತಾ ಶಿವರಾಜಕುಮಾರ್ ಟಿಕೆಟ್ ಪಡೆಯುವ ಸಾಧ್ಯತೆಗಳಿವೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಶಿವಮೊಗ್ಗ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಯಾರು ಸ್ಪರ್ಧಿಸುತ್ತಾರೆ ಎಂಬ ಚರ್ಚೆ ಆರಂಭವಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ಎಸ್ ಸುಂದರೇಶ್ ಕೂಡ ಚುನಾವಣಾ ಸ್ಪರ್ಧೆ ಇಂಗಿತಪಡಿಸಿದ್ದಾರೆ.ಆದರೆ ಪಕ್ಷದ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಹೇಳಿದ್ದಾರೆ. ಚುನಾವಣೆಗೆ ಮುಂದಿನ ವಾರದಿಂದ ತಯಾರಿ ನಡೆಸಲಿದ್ದೇವೆ. ಚುನಾವಣಾ ಅಭ್ಯರ್ಥಿ ಸಂಬಂಧ ಈಗಾಗಲೇ ಸರ್ವೆಗಳು ಆರಂಭವಾಗಿದೆ.. ಕೆಲವು ಮಾಧ್ಯಮಗಳಲ್ಲಿ ನನ್ನ ಹೆಸರು ಕೂಡ ಹಾಕಿದ್ದಾರೆ.ಆದರೆ ಪಕ್ಷದ ಪರವಾಗಿ ಕೆಲಸ ಮಾಡುತ್ತಾ ಹೋಗುವುದು ನನ್ನ ಆದ್ಯ ಕರ್ತವ್ಯ ಪಕ್ಷ ಏನು ಮಾಡುತ್ತೋ ನೋಡಬೇಕು. ಎಂದು ತಿಳಿಸಿದರು. ಶಿವಮೊಗ್ಗದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಹೆಚ್ಎಸ್ ಸುಂದರೇಶ್ ಅವರಿಗೆ ಟಿಕೆಟ್ ಸಿಗಲೆಂದು ಆಶಯ ವ್ಯಕ್ತಪಡಿಸಿದರು.  ಈ ಮಧ್ಯ   ನಟ ಶಿವರಾಜ್ ಕುಮಾರ್ ದಂಪತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

Post a Comment

Previous Post Next Post