ಸಾಗರ ರಸ್ತೆಯಲ್ಲಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ ದಂಡ ವಿಧಿಸಿದ್ದಾರೆ.

 ಸಾಗರ ರಸ್ತೆಯಲ್ಲಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ ಚಾಲಕನಿಗೆ ಟ್ರಾಫಿಕ್ ಪೊಲೀಸರು ಬರೋಬ್ಬರಿ ದಂಡ ವಿಧಿಸಿದ್ದಾರೆ. ಈ ಘಟನೆ ನಿನ್ನೆ ನಡೆದಿದೆ.ನಿನ್ನೆ ಸಾಗರದಿಂದ ಶಿವಮೊಗ್ಗ ನಗರಕ್ಕೆ ಬರುತ್ತಿದ್ದ ಗಜಾನನಬಸ್ ಚಾಲಕ ಮೊಬೈಲ್ ನಲ್ಲಿ ಮಾತನಾಡಿಕೊಂಡು ಚಲಾಯಿಸುತ್ತಿದ್ದ. ಇದನ್ನ ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರು ವಿಡಿಯೋ ಮಾಡಿಕೊಂಡು ಪೊಲೀಸರಿಗೆ ಕಳುಹಿಸಿದ್ದಾರೆ.


ಟ್ರಾಫಿಕ್ ಪೊಲೀಸ್ ಇನ್‌ಸ್ಪೆಕ್ಟರ್ ಸಂತೋಷ್ ಕುಮಾರ್ ವಿಡಿಯೋವನ್ನು ಪರಿಶೀಲಿಸಿ, ಸಂಚಾರ ನಿಯಮ ಉಲ್ಲಂಘನೆ ಮಾಡಿ ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ಬಸ್ ಚಾಲಕ ಮನ್ಸೂರ್ ಅಲಿಗೆ ಐಎಂವಿ ಕಾಯ್ದೆಯಡಿಯಲ್ಲಿ ರೂ 5,000/- ದಂಡ ವಿಧಿಸಿ ಕ್ರಮ ಕೈಗೊಂಡಿರುತ್ತಾರೆ.


Post a Comment

Previous Post Next Post