ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ!

 ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

                                              ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

Posted By : Rekha.M
Source : Online Desk


ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹೊಳೆಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ರಾತ್ರಿ ಧ್ವಂಸ ನಡೆದಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.

ಗ್ರಾಮದ ಮುಖ್ಯ ಜಂಕ್ಷನ್‌ನಲ್ಲಿ 18 ವರ್ಷಗಳ ಹಿಂದೆ ರಾಷ್ಟ್ರಪಿತನ ಪ್ರತಿಮೆ ಪ್ರತಿಷ್ಠಾಪಿಸಲಾಗಿತ್ತು. ಘಟನೆಯ ತನಿಖೆಯ ಭಾಗವಾಗಿ, ಪೊಲೀಸರು  ಹೇಳಿಕೆಗಳನ್ನು ದಾಖಲಿಸಲು ಪ್ರಾರಂಭಿಸಿದ್ದಾರೆ. ಸದ್ಯಕ್ಕೆ ಯಾವುದೇ ಬಂಧನವಾಗಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. 


Post a Comment

Previous Post Next Post