ಬ್ಯಾಂಕಾಕ್ ಪ್ರವಾಸದಲ್ಲಿದ್ದ ವೇಳೆ ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ

 ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

                                                ವಿಜಯರಾಘವೇಂದ್ರ ಮತ್ತು ಸ್ಪಂದನಾ

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ.

ನಿನ್ನೆ ಬ್ಯಾಂಕಾಕ್ ನಲ್ಲಿ ಹೃದಯಾಘಾತವಾಗಿ, ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸ್ಪಂದನಾ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾಗಿದ್ದಾರೆ.

ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಪಂದನಾ ತಂದೆ ಬಿ.ಕೆ ಶಿವರಾಂ ಮತ್ತು ಅವರ ತಂದೆ ಬ್ಯಾಂಕಾಕ್ ಗೆ ತೆರಳಿದ್ದಾರೆ. ವಿಜಯ ರಾಘವೇಂದ್ರ ಅವರು ಶೂಟಿಂಗ್ ನಿಮಿತ್ತ ಬೆಂಗಳೂರಿನಲ್ಲಿಯೇ ಇದ್ದರು ಎಂದು ತಿಳಿದು ಬಂದಿದೆ, ಸ್ಪಂದನಾ ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದರು ಎನ್ನಲಾಗಿದೆ.

ನಾಳೆ ಬೆಂಗಳೂರಿಗೆ ವಿಜಯ್‌ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ಸ್ಪಂದನಾ  ಮತ್ತು ವಿಜಯ್‌ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಇವರಿಗೆ ಶೌರ್ಯ ಎಂಬ ಒಬ್ಬ ಮಗನಿದ್ದಾನೆ.

ಸ್ಪಂದನಾ 2016 ರಲ್ಲಿ ತೆರೆಕಂಡ ರವಿಚಂದ್ರನ್ ಅವರ ಅಪೂರ್ವ ಸಿನಿಮಾದಲ್ಲಿ ನಟಿಸಿದ್ದರು, ಇದರ ಜೊತೆಗೆ ಸ್ಪಂದನಾ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿದ್ದಾರೆ.

 


Post a Comment

Previous Post Next Post