ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಎಫ್‌ಐಆರ್‌: ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಕೇಸ್

 ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

                                                          ಚೈತ್ರಾ ಕುಂದಾಪುರ

Posted By :Rekha.M
Source : Online Desk
ಉಡುಪಿ: ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ಹಿಂದು ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ಬಟ್ಟೆ ಅಂಗಡಿ ತೆರೆಯುವ ಹೆಸರಿನಲ್ಲಿ 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನ ಮೇರೆಗೆ ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬ್ರಹ್ಮಾವರದ ಸುದಿನ ಎಂಬುವವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಹಿಂದು ಧ್ವಜ, ಕೇಸರಿ ಬಂಟಿಂಗ್ಸ್ ಉದ್ಯಮ ಆರಂಭಿಸುವುದಾಗಿ ಸುಮಾರು 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಬಂಧನವಾಗಿದ್ದ ಚೈತ್ರಾಗೆ ಬಾಯಿಯಲ್ಲಿ ನೊರೆ ಕಾಣಿಸಿಕೊಂಡು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಚಿಕಿತ್ಸೆ ನಂತರ ಅವರು ಸೋಮವಾರ ಡಿಸ್ಚಾರ್ಜ್‌ ಆಗಿದ್ದು, ಸದ್ಯ ಅವರನ್ನು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಸ್ಥಳಾಂತರಿಸಲಾಗಿದೆ.


Post a Comment

Previous Post Next Post