ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ!

 ಶಿವಮೊಗ್ಗದಲ್ಲಿ ಈದ್​ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

                                                   ಈದ್ ಮಿಲಾದ್ ಮೆರವಣಿಗೆ

Posted By : Rekha.M
Source : Online Desk
ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್​ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.
ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಸ್ಥಳಕ್ಕೆ ರ್ಯಾಪಿಡ್​ ಆ್ಯಕ್ಷನ್​ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದೆ. ಸ್ಥಳಕ್ಕೆ ಎಸ್​ಪಿ ಜಿ.ಕೆ ಮಿಥುನ್ ಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈದ್ ಮಿಲಾದ್ ಆಚರಣೆ ವೇಳೆ ಕಲ್ಲೆಸೆತ ಉಂಟಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೆ ಆದೇಶಿಸಿದ್ದಾರೆ. ಇನ್ನು ಗಲಾಟೆ ವೇಳೆ ಸಿಲುಕಿದ್ದ 7 ಜನರನ್ನು ಪೊಲೀಸರು ರಕ್ಷಿಸಿದ್ದಾರೆ.

ಶಿವಮೊಗ್ಗದ ರಾಗಿಗುಡ್-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಟಿಪ್ಪುವಿನ ಕಟೌಟ್​ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
 
Post a Comment

Previous Post Next Post