ಬಿಜೆಪಿಯ ವಿಷಯುಕ್ತ ಜಾಮೂನು ಕುಮಾರಸ್ವಾಮಿಗೂ ಅರಿವಾಗಲಿದೆ, ಆದ್ರೆ ಅಷ್ಟೊತ್ತಿಗೆ ಜೆಡಿಎಸ್ ಪ್ರಾಣ ಹೋಗಿರುತ್ತದೆ!

 ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಅಧಿಕಾರದ ಹಪಹಪಿಯಲ್ಲಿರುವ ಬಿಜೆಪಿಯವರು ಪಕ್ಷಕ್ಕೆ ಸೆಳೆಯುವಾಗ ಜಾಮೂನು...

                                                           ಎಚ್.ಡಿ ಕುಮಾರಸ್ವಾಮಿ

Posted By :Rekha.M
Source : Online Desk

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಅಧಿಕಾರದ ಹಪಹಪಿಯಲ್ಲಿರುವ ಬಿಜೆಪಿಯವರು ಪಕ್ಷಕ್ಕೆ ಸೆಳೆಯುವಾಗ ಜಾಮೂನು ಕೊಡ್ತಾರೆ. ನಂತರ ವಿಷ ಕೊಡುತ್ತಾರೆ.. ಇದನ್ನು ಬಿಜೆಪಿಯವರೇ ಹೇಳಿದ್ದು ಎಂದು ಟ್ವೀಟ್ ಮಾಡಿದೆ.

ಈಗ ಬಿಜೆಪಿಯ ಜಾಮೂನು ತಿನ್ನುತ್ತಿರುವ ಕುಮಾರಸ್ವಾಮಿಯವರು ಮುಂದೆ ವಿಷ ತಿನ್ನಲು ತಯಾರಿರುವುದು ಒಳ್ಳೆಯದು! ಬಿಜೆಪಿಯವರು ಜಾಮೂನಿನ ಒಳಗೆ ವಿಷ ಬೆರೆಸಿರುತ್ತಾರೆ ಎಂಬ ಸತ್ಯ ವಲಸಿಗರಿಗೆ ಅರಿವಾಗಿದೆ. ಮುಂದೆ ಕುಮಾರಸ್ವಾಮಿಯವರಿಗೂ ಅರಿವಾಗಲಿದೆ... ಆದರೆ ಅರಿವಾಗುವುದರೊಳಗೆ ಜೆಡಿಎಸ್ ಪ್ರಾಣ ಹೋಗಿರುತ್ತದೆ ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ನಿನ್ನೆಯಷ್ಟೇ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸ್ವಪಕ್ಷದ ವಿರುದ್ಧವೇ ಕಿಡಿಕಾರಿದ್ದು, ಕಾಂಗ್ರೆಸ್‌ಗೆ ನಾನು ರಾಜೀನಾಮೆ ಕೊಟ್ಟು ಬಿಜೆಪಿಗೆ ಬರುವಾಗ ಜಾಮೂನು ಕೊಟ್ಟರು. ಆದರೆ ಅಧಿಕಾರ ಮುಗಿದ ಮೇಲೆ ವಿಷ ಕೊಟ್ಟರು. ನನ್ನನ್ನ ಪಕ್ಷದಿಂದ ಹೊರಹಾಕಲು ಕೆಲವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದು ಆರೋಪಿಸಿದ್ದರು.


Post a Comment

Previous Post Next Post