ರಾಜ್ಯದಲ್ಲಿ 'ನಂದಿನಿ' ಮಾದರಿಯಲ್ಲಿ ಕುರಿ- ಮೇಕೆ ಮಾಂಸ ಮಾರಾಟ ಮಳಿಗೆಗಳ ಸ್ಥಾಪನೆಗೆ ಸರ್ಕಾರ ಮುಂದು!

 ಕರ್ನಾಟಕ ಸರ್ಕಾರವು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಮಾದರಿಯಲ್ಲಿಯೇ ರಾಜ್ಯದಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ.

                                      ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ

Posted By : Rekha.M
Source :Online Desk

ಬೆಂಗಳೂರು: ಕರ್ನಾಟಕ ಸರ್ಕಾರವು ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್) ನಂದಿನಿ ಹಾಲಿನ ಉತ್ಪನ್ನಗಳ ಮಳಿಗೆ ಮಾದರಿಯಲ್ಲಿಯೇ ರಾಜ್ಯದಾದ್ಯಂತ ತನ್ನ ಮಳಿಗೆಗಳ ಮೂಲಕ ಪ್ಯಾಕ್ ಮಾಡಿದ ಕುರಿ ಮತ್ತು ಮೇಕೆ ಮಾಂಸವನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ.

ಪಶುಸಂಗೋಪನಾ ಇಲಾಖೆಯಡಿ ಈ ಕ್ರಮವು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯನ್ನು ಹೊಂದಿದೆ.
ದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿಯೂ ಆಗಿರುವ ಕಾಂಗ್ರೆಸ್ ಎಂಎಲ್‌ಸಿ ಟಿಬಿ ಜಯಚಂದ್ರ ನೀಡಿರುವ ಹೇಳಿಕೆಯಲ್ಲಿ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ಹೈಟೆಕ್ ಕಸಾಯಿಖಾನೆ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಖಾಸಗಿ ಏಜೆನ್ಸಿ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಕಸಾಯಿಖಾನೆ ಜನವರಿ ವೇಳೆಗೆ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ ಎಂದಿದ್ದಾರೆ.

ಈ ಯೋಜನೆ ಕುರಿತು ವಿವರಿಸಿದ ಜಯಚಂದ್ರ, ರೈತರು ತಮ್ಮ ಕುರಿ ಮತ್ತು ಮೇಕೆಗಳಿಗೆ ಉತ್ತಮ ಬೆಲೆಯನ್ನು ಪಡೆಯಲು ಮತ್ತು ಜನರಿಗೆ ಗುಣಮಟ್ಟದ ಮಾಂಸವನ್ನು ಒದಗಿಸಲು ಸಹಾಯ ಮಾಡುವ ಉದ್ದೇಶದಿಂದ ಈ ಉಪಕ್ರಮವನ್ನು ರೂಪಿಸಲಾಗಿದೆ. ಈ ಯೋಜನೆಯಡಿ, ರೈತರಿಂದ ನೇರವಾಗಿ ಪ್ರಾಣಿಗಳನ್ನು ಖರೀದಿಸಲಾಗುತ್ತದೆ. ಇದು ಅವರ ಆದಾಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಎಂಎಫ್‌ನ ನಂದಿನಿಯಂತಹ ಮಾಂಸದ ಬ್ರಾಂಡ್ ರಚಿಸಲು ಇಲಾಖೆ ಶ್ರಮಿಸಲಿದೆ ಎಂದರು.

    'ಕುರಿ ಮತ್ತು ಮೇಕೆಗಳನ್ನು ಸಾಕುವ ರೈತರು ತಮ್ಮ ಪ್ರಾಣಿಗಳಿಗೆ ಲಾಭದಾಯಕ ಬೆಲೆಗಳನ್ನು ಪಡೆಯಬೇಕೆಂದು ನಾವು ಬಯಸುತ್ತೇವೆ. ಈ ರೈತರ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಾವು ಬಯಸುತ್ತೇವೆ. ಈ ಸಂಪೂರ್ಣ ಕ್ರಮದಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲಿದೆ' ಎಂದು ಅವರು ಹೇಳಿದರು.

    ಕುರಿ ಮತ್ತು ಮೇಕೆ ಚರ್ಮದಿಂದ ಉತ್ಪನ್ನಗಳನ್ನು ತಯಾರಿಸುವ ಯೋಜನೆಯನ್ನೂ ಸರ್ಕಾರ ಹೊಂದಿದೆ. 'ಇಲಾಖೆಯ ಅಧಿಕಾರಿಗಳನ್ನು ತಮಿಳುನಾಡು ಮತ್ತು ಕೋಲ್ಕತ್ತಾದ ಅಂಬೂರ್‌ಗೆ ಕಳುಹಿಸಲಾಗುವುದು. ಅಲ್ಲಿ ಕುರಿ ಮತ್ತು ಮೇಕೆ ಚರ್ಮವನ್ನು ಬಳಸಿ ತಯಾರಿಸುವ ಉತ್ಪನ್ನಗಳ ಬಗ್ಗೆ ಅಧ್ಯಯನ ಮಾಡಲಾಗುತ್ತದೆ' ಎಂದು ಅವರು ಹೇಳಿದರು. 

    ಜಯಚಂದ್ರ ಅವರು ವಿಧಾನಸೌಧದಲ್ಲಿ ಈ ಯೋಜನೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು.
    Post a Comment

    Previous Post Next Post