ಶಿಕ್ಷಣ ಸಚಿವರ ಜಿಲ್ಲೆಯೊಂದು ಅಮಾನುಷ ಘಟನೆ: ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ!

 ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ.

 
                                                            ಸಾಂದರ್ಭಿಕ ಚಿತ್ರ

Posted By : Rekha.M
Source : Online Desk
ಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ.
ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿ ನಂತರ ಶಹಬ್ಬಾಶ್ ಗಿರಿ ಕೊಟ್ಟು ಚಪ್ಪಾಳೆ ತಟ್ಟಿಸಿದ್ದಾರೆ  ಎಂದು ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ  ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಿಸಿದ್ದಕ್ಕೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದರಿಂದ ವಿದ್ಯಾರ್ಥಿನಿಯ ಆರೋಗ್ಯ ಏರುಪೇರಾಗಿದ್ದು, ಇದರಿಂದ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್ ಆರೋಪಿಸಿದ್ದಾರೆ. ಮೊಟ್ಟೆ ತಿನ್ನಲು ಬಲವಂತ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲು ಶ್ರೀಕಾಂತ್ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು‌ ಮಕ್ಕಳ ‌ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿಯ ತಂದೆ ಶ್ರೀಕಾಂತ್ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಹಾಗೂ ಡಿಡಿಪಿಐ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.


Post a Comment

Previous Post Next Post