ಕೋವಿಡ್ ಜೆಎನ್.1 ರೂಪಾಂತರಿ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ

 ಕೇರಳದಲ್ಲಿ ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕರ್ನಾಟಕದಲ್ಲಿ ಅದರಲ್ಲೂ ಗಡಿಭಾಗದಲ್ಲಿ ಹೈ ಅಲರ್ಟ್ ಆಗಿರುವ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಬಿಡುತ್ತಿದ್ದಾರೆ.

                                                       ಸಾಂದರ್ಭಿಕ ಚಿತ್ರ

Posted By : Rekha.M
Source : Online Desk

ಕೊಡಗು/ ಚಾಮರಾಜನಗರ/ಮೈಸೂರು/ಮಂಗಳೂರು: ಕೇರಳದಲ್ಲಿ ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕರ್ನಾಟಕದಲ್ಲಿ ಅದರಲ್ಲೂ ಗಡಿಭಾಗದಲ್ಲಿ ಹೈ ಅಲರ್ಟ್ ಆಗಿರುವ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಬಿಡುತ್ತಿದ್ದಾರೆ.

ಕೇರಳದಿಂದ ಬರುವ ಖಾಸಗಿ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಇಲಾಖೆ ಸೂಚನೆಯಂತೆ ತಪಾಸಣೆ ಮಾಡಲಾಗುತ್ತಿದೆ. ಕೋವಿಡ್ ಸೋಂಕಿನ ಲಕ್ಷಣ ಕಂಡುಬಂದರೆ ಅಂತವರಿಗೆ ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಲಾಗುತ್ತದೆ. ಇಲ್ಲಿಯವರೆಗೆ ನಡೆದ ತಪಾಸಣೆಯ ಸಂದರ್ಭ ಯಾರಿಗೂ ಸೋಂಕಿನ ಲಕ್ಷಣ ಕಂಡುಬಂದಿಲ್ಲ ಎಂದು ತಿಳಿಸಿದರು.

ಚಾಮರಾಜನಗರ ಕೇರಳ ಗಡಿಯಲ್ಲಿ ಅರಣ್ಯ ಇಲಾಖೆ ಕ್ರಮ: ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯಿಂದ ಸೋಂಕು ಹರಡುತ್ತಿದ್ದು, ಇತ್ತ ಚಾಮರಾಜನಗರ ಗಡಿಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡಬೇಕಿದ್ದ ಕೆಲಸವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ. ಮೂಲೆಹೊಳೆ ಚೆಕ್ ಪೋಸ್ಟ್​​ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತಿ ಕಾರ್ಯ ಆರಂಭಿಸಿದ್ದಾರೆ. ಕೇರಳದಿಂದ ಬರುವ ವಾಹನ ಸವಾರರಿಗೆ ಮಾಸ್ಕ್ ಹಾಕಲು ಸೂಚನೆ ನೀಡುತ್ತಿದ್ದಾರೆ.


Post a Comment

Previous Post Next Post