ಮಂಗಳೂರು: ಇಬ್ಬರು ಡ್ರಗ್ಸ್ ಪೆಡ್ಲರ್‌ಗಳ ಬಂಧನ, 6 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

 ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಇಲ್ಲಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ಅವರ ಬಳಿಯಿದ್ದ 6 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.​

                                                         ಸಾಂದರ್ಭಿಕ ಚಿತ್ರ

Posted By : Rekha.M
Source : Online Desk

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಇಲ್ಲಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ಅವರ ಬಳಿಯಿದ್ದ 6 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ನಗರದ ಕದ್ರಿ ಪಾರ್ಕ್‌ನಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳಿಂದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ನವಾಝ್ (40) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜರುದ್ದೀನ್ ಅಲಿಯಾಸ್ ಅಜರ್ (39) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 6 ಲಕ್ಷ ರೂ. ಮೌಲ್ಯದ 120 ಗ್ರಾಂ ಎಂಡಿಎಂಎಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂರು ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕದ ಮಾಪಕ ಮತ್ತು ಮಾದಕ ದ್ರವ್ಯ ಮಾರಾಟಕ್ಕೆ ಬಳಸಲಾದ ಸ್ಕೂಟರ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 6,83,120 ರೂ. ಎಂದು ಅಂದಾಜಿಸಲಾಗಿದೆ.

ಸೈಬರ್, ಎಕನಾಮಿಕ್ ಮತ್ತು ನಾರ್ಕೋಟಿಕ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಂಧೆಯಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.


Post a Comment

Previous Post Next Post