ಶಾಲಾ- ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ಯತ್ನಾಳ್ ಕರೆ!

 ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಂತೆಯೇ, ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ತಾರಕಕ್ಕೇರಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ  ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ

Posted By : Rekha.M
Source : Online Desk

ಬೆಂಗಳೂರು: ಹಿಜಾಬ್ ನಿಷೇಧ ಆದೇಶವನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದಂತೆಯೇ, ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ತಾರಕಕ್ಕೇರಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ  ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಯತ್ನಾಳ್, ಸಿದ್ದರಾಮಯ್ಯ ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ  ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ. ಅವರಿಗಿಲ್ಲದ ಸಮವಸ್ತ್ರ ನೀತಿ ಹಿಂದೂಗಳಿಗೂ ಇಲ್ಲ ಎಂದಿದ್ದಾರೆ. 

ಸಿದ್ದರಾಮಯ್ಯನವರಿಗೆ ಮಾಹಿತಿಯ ಕೊರತೆ ಇದೆ, ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿ ಯಾವ ಆದೇಶವೂ ಇಲ್ಲ,  ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯನ್ನು ಜಾರಿ ಮಾಡಿದ್ದು ಸ್ಥಳೀಯ ಕಾಲೇಜುಗಳು ನಿರ್ಧಾರ ಮಾಡಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಹೇಳಿದ್ದರೂ, ರಾಜಕಾರಣಕ್ಕಾಗಿ ಶಾಲಾ ಕಾಲೇಜುಗಳ ಸಮವಸ್ತ್ರ ನೀತಿಯನ್ನೂ ಅಮಾನತು ಮಾಡುವ ಕೆಲಸವನ್ನು  ಸಿದ್ದರಾಮಯ್ಯನವರು ಮಾಡುತ್ತಿದ್ದಾರೆ ಎಂದು ಅವರು ಟೀಕಾಪ್ರಹಾರ ನಡೆಸಿದ್ದಾರೆ.



Post a Comment

Previous Post Next Post