'ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ: ಪ್ರೈವೇಟ್ ಜೆಟ್ ನಲ್ಲಿ ಮಜವಾದಿ ಸಿಎಂ ಮೋಜು ಮಸ್ತಿ'

 ನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

                                         ಖಾಸಗಿ ಜೆಟ್ ನಲ್ಲಿ ಸಿಎಂ ಮತ್ತು ಸಹೋದ್ಯೋಗಿಗಳು

Posted By : Rekha.M
Source : Online Desk

ಬೆಂಗಳೂರು: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ ಎಂದು ಕಿಡಿಕಾರಿದೆ.

ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ.  ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ  ಸಿದ್ದರಾಮಯ್ಯ  ಮತ್ತು ಅವರ ಅತ್ಯಾಪ್ತ ಜಮೀರ್ ಅಹ್ಮದ್ ಖಾನ್ ಅವರ ಆಡಂಬರಕ್ಕೇನು ಕಡಿಮೆ ಇಲ್ಲ.ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದ ಕಿಡಿ ಕಾರಿದೆ.

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್  ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ  ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ  ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನ ಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ….” ಎಂದು ವರ್ಣಿಸಬಹುದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.



Post a Comment

Previous Post Next Post