ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು

 ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಶನಿವಾರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದೆ.

                                                            ಸಾಂದರ್ಭಿಕ ಚಿತ್ರ

Posted By : Rekha.M
Source : Online desk

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ಶಿಕ್ಷಣ ಇಲಾಖೆ ಶನಿವಾರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದೆ.

ಅಮಾನತುಗೊಂಡ ಶಿಕ್ಷಕರನ್ನು ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಮತ್ತು ಸಹಾಯಕ ಶಿಕ್ಷಕ ಶಾಂತಕುಮಾರ್ ಎಂದು ಗುರುತಿಸಲಾಗಿದೆ.

ಸೊಪ್ಪಿನಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಸಹಾಯಕ ಶಿಕ್ಷಕ ಶಾಂತಕುಮಾರ್ ವಿರುದ್ಧ ಕೋರಿ ಅವರಿಗೆ ದೂರು ನೀಡಿದ್ದರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಈ ಕುರಿತು ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ವರದಿ ಸಲ್ಲಿಸಿದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಪರಮೇಶ್ವರಪ್ಪ ಅವರು ಸಂಬಂಧಪಟ್ಟ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.Post a Comment

Previous Post Next Post