ಶಿವಮೊಗ್ಗ : ಸಾರ್ವಜನಿಕರ ಮತ್ತು ತನ್ನ ಪ್ರಾಣದ ಅರಿವಿಲ್ಲದೆ ಅಪಾಯಕಾರಿ ವ್ಹೀಲಿಂಗ್ ಮಾಡುತಿದ್ದ ಇಬ್ಬರು ಯುವಕರನ್ನು ತಡೆದ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್, ದಂಡ ವಿಧಿಸಲು ಆದೇಶಿಸಿದ ನ್ಯಾಯಾಲಯ.

ದಿನಾಂಕ:15/08/2023 ರಂದು ಬೆಳಿಗ್ಗೆ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ರಸ್ತೆಯಲ್ಲಿ ಫೈಸಲ್ ಅಹ್ಮದ್ ಮತ್ತು ಸೂಫಿಯಾನ್ ಖಾನ್ ಎಂಬ ಯುವಕರಿಬ್ಬರು ಎರಡು YAMAHA  RX  ಬೈಕಿಗಳಲ್ಲಿ ಅತಿ ವೇಗ, ಅಜಾಗರುಕತೆ ಮತ್ತು ಅಪಾಯಕಾರಿ ರೀತಿಯಲ್ಲಿ ಸಾರ್ವಜನಿಕರ ಮತ್ತು ತನ್ನ ಪ್ರಾಣಕ್ಕೆ ಹಾನಿಯಾಗುವಂತೆ ವ್ಹೀಲಿಂಗ್ ಮಾಡುತ್ತಿದ್ದು, ಈ ಬಗ್ಗೆ ಗುನ್ನೆ ಸಂಖ್ಯೆ 0107/2023 ಕಲಂ 279 ಐಪಿಸಿ, 184, 189, 177 ಐಎಂವಿ ಕಾಯ್ದೆ ಮತ್ತು 51 ಸಿಎಂವಿ ರೂಲ್ ರೀತ್ಯಾ ಪ್ರಕರಣ ದಾಖಲಿಸಿಕೊಂಡಿರುತ್ತದೆ.

ಪ್ರಕರಣದ ತನಿಖಾಧಿಕಾರಿಗಳಾದ ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ರವರು ಬೈಕ್ ಗಳ ಚಾಲಕರು & ಮಾಲೀಕ ಸೇರಿ 3 ಜನ ಆರೋಪಿತರ ವಿರುದ್ದ ಘನ ನ್ಯಾಯಾಲಯಕ್ಕೆ ದೋಷರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ. 

ಘನ ನ್ಯಾಯಾಲಯದಲ್ಲಿ  ಶ್ರೀ ಕಿರಣ್ ಕುಮಾರ್ ಸಹಾಯಕ ಸರ್ಕಾರಿ ಅಭಿಯೋಜಕರು ಪ್ರಕರಣ ವಾದ ಮಂಡಿಸಿದ್ದು, ಘನ 3ನೇ ಎಸಿಜೆ & ಜೆಎಂಎಫ್ ಸಿ, ಶಿವಮೊಗ್ಗ, ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಪ್ರಕರಣದ ಆರೋಪಿತರ ವಿರುದ್ಧ ಆರೋಪ ದೃಢ ಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಧೀಶರಾದ ಶ್ರೀ ಮಾಯಪ್ಪ ರವರು ದಿನಾಂಕ:-06/12/2023ರಂದು ಆರೋಪಿ 1) ಫೈಸಲ್ ಅಹ್ಮದ್, 20 ವರ್ಷ, ಇಲಿಯಾಸ್ ನಗರ ಶಿವಮೊಗ್ಗ ಟೌನ್ ಈತನಿಗೆ 11,000 ರೂ, ದಂಡ, 2)  ಸೂಫಿಯಾನ್ ಖಾನ್, 21 ವರ್ಷ ಟ್ಯಾಂಕ್ ಮೊಹಲ್ಲಾ , ಶಿವಮೊಗ್ಗ ಟೌನ್ ಈತನಿಗೆ 8000 ರೂ ದಂಡ ಮತ್ತು ಬೈಕಿನ ಆರ್ ಸಿ ಮಾಲೀಕನಾದ 3) ಮೊಹಮ್ಮದ್ ಸೈಫುಲ್ಲಾ, 50 ವರ್ಷ, ಇಲಿಯಾಸ್ ನಗರ ಶಿವಮೊಗ್ಗ ಟೌನ್ ಈತನಿಗೆ 4500 ರೂ ದಂಡ ವಿಧಿಸಿ  ಆದೇಶಿಸಿರುತ್ತದೆ.

Post a Comment

Previous Post Next Post