ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ: 200 ಕೋಟಿ ಕ್ಲಬ್ ನತ್ತ ಮುನ್ನುಗಿದ 'ದರ್ಶನ್' ಕಾಟೇರ!

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್ 2 ಮತ್ತು ಕಾಂತಾರ ಚಿತ್ರಗಳ ಬಾಕ್ಸಾ ಆಫೀಸ್ ದಾಖಲೆಯನ್ನು ಹಿಂದಿಕ್ಕಿ ಕಾಟೇರ ಮುನ್ನುಗುತ್ತಿದೆ ಎಂದು ವರದಿಯಾಗಿದೆ.

                                                                        ಸಂಗ್ರಹ ಚಿತ್ರ

Posted By : Rekha.M
Source : Online Desk

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿದ್ದು ಗ್ರಾಸ್ ಕಲೆಕ್ಷನ್ ನಲ್ಲಿ 190 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.

ಕಳೆದ ಮೂರು ದಿನಗಳಲ್ಲಿ 'ಕಾಟೇರ' ಒಟ್ಟು 33.47 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು ಒಟ್ಟಾರೆ ಗ್ರಾಸ್ ಕಲೆಕ್ಷನ್ 190.89 ಕೋಟಿ ರೂಪಾಯಿ ಆಗಿದೆ ಎಂದು ಚಿತ್ರತಂಡ ಟ್ವೀಟ್ ಮಾಡಿದೆ. 

ಕೆಜಿಎಫ್ 1 ಮತ್ತು 2 ಫ್ಯಾನ್ ಇಂಡಿಯಾ ಚಿತ್ರವಾಗಿದ್ದು ಭಾರತದಾದ್ಯಂತ ಕ್ರಮವಾಗಿ 250 ಕೋಟಿ ಮತ್ತು 1,200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇನ್ನು ಕರ್ನಾಟಕದಲ್ಲಿ ಕೆಜಿಎಫ್ 2 ಚಿತ್ರ 167 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇನ್ನು ಇದಾದ ನಂತರ ಬಂದ ಕಾಂತಾರ ಚಿತ್ರದ ಕರ್ನಾಟಕದಲ್ಲಿ 185 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು ಒಟ್ಟಾರೆ ಭಾರತದಾದ್ಯಂತ 400ಕ್ಕೂ ಹೆಚ್ಚು ಕೋಟಿ ಕಲೆಕ್ಷನ್ ಮಾಡಿತ್ತು.

ಆದರೆ ಕರ್ನಾಟಕದ ಮಟ್ಟಿಗೆ ನೋಡಿದರೆ ಕಾಟೇರ ಚಿತ್ರದ 190 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿರುವುದರಿಂದ ಈ ಎರಡು ಚಿತ್ರಗಳ ದಾಖಲೆಯನ್ನು ಹಿಂದಿಕ್ಕಿದೆ ಎಂದು ಹೇಳಲಾಗುತ್ತಿದೆ.
Post a Comment

Previous Post Next Post