ಶಿವಮೊಗ್ಗ: ಪ್ರೀತಿಸಿದ ಯುವಕನನ್ನು8 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ!

 ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

                                                ಆತ್ಮಹತ್ಯೆ ಮಾಡಿಕೊಂಡ ಶಮಿತಾ

Posted By : Rekha.M
Source : Online Desk

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ತಿಂಗಳಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು.  ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.


Post a Comment

Previous Post Next Post