ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಬೆಳಗಾವಿ ಜಿಲ್ಲೆಯಲ್ಲಿ ಉದ್ವಿಗ್ನತೆ

 ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

               ಹೊಸ ವರ್ಷದಾಚರಣೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು

Posted By : Rekha.M
Source : OnlineDesk

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳ ಗುಂಪೊಂದು ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಘಟನೆ ನಡೆದಿದೆ.

ಬೆಳಗಾವಿ ನಗರದ ಸುಳಗಾ ಗ್ರಾಮದ ರಾಯಣ್ಣ ವೃತ್ತದಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ.

ಕನ್ನಡಪರ ಹೋರಾಟಗಾರರು ಈ ಘಟನೆಯನ್ನು ಖಂಡಿಸಿದ್ದು, ತಪ್ಪಿತಸ್ಥರನ್ನು ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ.

ರಾಯಣ್ಣ ವೃತ್ತದಲ್ಲಿ ಅಳವಡಿಸಿದ್ದ ಕನ್ನಡ ಧ್ವಜಕ್ಕೆ ರಾತ್ರಿ ವೇಳೆ ಕಿಡಿಗೇಡಿಗಳ ಗುಂಪೊಂದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಪೊಲೀಸರು ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿದ್ದು, ಆರೋಪಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.


Post a Comment

Previous Post Next Post