ತೀರ್ಥಹಳ್ಳಿ : ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕೊದಂಡರಾಮನ ದೇವಸ್ಥಾನ ಸ್ವಚ್ಛತೆ ಕಾರ್ಯ!

 ಜ.22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಜನ್ಮಭೂಮಿಯಲ್ಲಿ ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿದ್ದು ಈ ಕಾರಣದಿಂದ ತೀರ್ಥಹಳ್ಳಿಯ ರಥಬೀದಿಯಲ್ಲಿರುವ ಶ್ರೀ ಕೊದಂಡರಾಮನ ದೇವಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಗಿದೆ.


ಈ ಕಾರಣದಿಂದ ಇಂದು ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ದೇವಸ್ಥಾನದ ಸ್ವಚ್ಛತಾ ಕಾರ್ಯ ಮಾಡಲಾಯಿತು. ದೇವಸ್ಥಾನದ ಸುತ್ತ ಮುತ್ತ ಇದ್ದಂತಹ ಕಸಗಳನ್ನು ಸ್ವಚ್ಛಗೊಳಿಸಿ ಸುಣ್ಣ ಬಣ್ಣ ಬಳಿದು ದೇವಸ್ಥಾನನವನ್ನು ಹೊಸ ರೂಪಕ್ಕೆ ತರಲು ಕೈ ಹಾಕಲಾಗಿದೆ. ಈಗಾಗಲೇ ಸ್ವಚ್ಛತೆ ಕಾರ್ಯ ಭರದಿಂದ ಸಾಗುತ್ತಿದೆ.

ಜ.22 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೊದಂಡಸ್ವಾಮಿಗೆ ಮಹಾಮಂಗಳಾರತಿ ಕಾರ್ಯಕ್ರಮ ಜರುಗಲಿದೆ. ಈ ಪೂಜೆಗೆ ಪ್ರತಿಯೊಬ್ಬರು ಭಾಗವಹಿಸಿ ಎಂದು ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಪ. ಪಂ ಅಧ್ಯಕ್ಷೆ ಗೀತಾ ರಮೇಶ್, ವೈ ನಾಗೇಂದ್ರ, ರತ್ನಾಕರ್ ಶೆಟ್ಟಿ, ಬಿ. ಗಣಪತಿ,  ಅಮರನಾಥ್ ಶೆಟ್ಟಿ, ಸತೀಶ್ ಶೆಟ್ಟಿ, ಸೇರಿ ಹಲವರು ಭಾಗಿಯಾಗಿದ್ದಾರೆ.

Post a Comment

Previous Post Next Post