ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದು 'ಯುವನಿಧಿ'ಯೋಜನೆಗೆ ಇಂದು ಅಧಿಕೃತ ಚಾಲನೆ: ಏನಿದು 'ಯುವನಿಧಿ'?

 ಇಂದು ಜನವರಿ 12, ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ. ಇಂದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ 'ಯುವನಿಧಿ ಯೋಜನೆ'ಗೆ ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಚಾಲನೆ ನೀಡುತ್ತಿದ್ದಾರೆ.

                                                     ಯುವನಿಧಿ ಯೋಜನೆ

Posted By : Rekha.M
Source : Online Desk

ಬೆಂಗಳೂರು/ಶಿವಮೊಗ್ಗ: ಇಂದು ಜನವರಿ 12, ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ. ಇಂದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ 'ಯುವನಿಧಿ ಯೋಜನೆ'ಗೆ ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಚಾಲನೆ ನೀಡುತ್ತಿದ್ದಾರೆ.

ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ. ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಂದ ನೋಂದಣಿ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ: ಯುವ ನಿಧಿ ಚಾಲನೆ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಿತ್ರದುರ್ಗ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ ಸೇರಿ ಬೇರೆ ಬೆರೆ ಜಿಲ್ಲೆಗಳಿಂದ ಜನ ಆಗಮಿಸುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆಯಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಯುವನಿಧಿ ಯೋಜನೆ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ಪ್ರತಿ ತಿಂಗಳು ಸರ್ಕಾರ ಭತ್ಯೆ ನೀಡುತ್ತದೆ. ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ನೀಡಿದರೆ, ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. 

ನೋಂದಣಿ ಹೇಗೆ?: ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು.2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಎಸ್‍ಎಸ್‍ಎಲ್ ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದೆ.


Post a Comment

Previous Post Next Post