ಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ನಲ್ಲಿ ವ್ಯಕ್ತಿಯ ಜೇಬಿನಲ್ಲಿದ್ದ ಹಣ ಕಳವು!

 ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ವಾಸಿ ಎ ಚೌಡಪ್ಪ ರವರು ದಿನಾಂಕ: 11-12-2023 ರಂದು ಮದ್ಯಾಹ್ನ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಹರಪನಹಳ್ಳಿಗೆ ಹೋಗಲು ಬಸ್ ಹತ್ತುತ್ತಿರುವಾಗ ತುಂಬಾ ಜನ ಸಂದಣಿ ಇದ್ದು ಯಾರೋ ಕಳ್ಳರು ಅವರ ಜೇಬಿನಲ್ಲಿದ್ದ ರೂ 37,000/-  ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0435/2023  ಕಲಂ 379 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಆರೋಪಿತರ ಪತ್ತೆಗಾಗಿ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2  ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್ ಬಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ರವಿ ಪಾಟೀಲ್, ಪಿಐ ದೊಡ್ಡಪೇಟೆ ರವರ ನೇತೃತ್ವದ  ಶ್ರೀನಿವಾಸ್ ಪಿಎಸ್ಐ  ಮತ್ತು ಸಿಬ್ಬಂಧಿಗಲಾದ ಹೆಚ್ ಸಿ - ಪಾಲಾಕ್ಷ ನಾಯ್ಕ, ಲಚ್ಚಾನಾಯ್ಕ, ಸಿಪಿಸಿ -  ಚಂದ್ರಾನಾಯ್ಕ, ನಿತಿನ್, ಪುನಿತ್  ಮತ್ತು ಹೇಮಂತ್ ರವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ. 

ಸದರಿ ತನಿಖಾ ತಂಡವು ದಿಃ 06-01-2024  ರಂದು ಪ್ರಕರಣದ ಆರೋಪಿ ಶ್ರೀನಿವಾಸ್, 55 ವರ್ಷ, ಚೆನ್ನಗಿರಿ ಟೌನ್, ದಾವಣಗೆರೆ ಇವನನ್ನು ದಸ್ತಗಿರಿ ಮಾಡಿ ಆರೋಪಿತನಿಂದ  ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣನಲ್ಲಿ  ಕಳ್ಳತನವಾದ ಬಗ್ಗೆ   ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ವರದಿಯಾದ 03 ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ರೂ 30,000/-  ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. 

 ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.


Post a Comment

Previous Post Next Post